ಹಾವೇರಿ: ವಿದ್ಯುತ್ ತಂತಿ ತಗುಲಿ ಸುಮಾರು ಎಂಟು ಎಕರೆ ಗದ್ದೆಯಲ್ಲಿದ್ದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿರುವ ಘಟನೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ನಡೆದಿದೆ.
ಬಾಬು ಶಂಕ್ರಿಕೊಪ್ಪ ಮತ್ತು ಮಲ್ಲೇಶಪ್ಪ ಹೋತನಳ್ಳಿ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಬೆಳೆ ನಾಶವಾಗಿದೆ. ಕಟಾವಿಗೆ ಬಂದ ಕಬ್ಬು ಧಗಧಗನೆ ಉರಿಯವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ
Published On - 1:39 pm, Sat, 19 December 20