AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಕಿಚ್ಚು: ಬೆಳೆಗಾರರು, ಫ್ಯಾಕ್ಟರಿ ಮಾಲೀಕರೊಂದಿಗೆ ನಾಳೆ ಸಿಎಂ ಹೈವೋಲ್ಟೇಜ್ ಸಭೆ

ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆ (ಅ.26) ಕಬ್ಬು ಬೆಳೆಗಾರರ ಮಹತ್ವದ ಸಭೆ ಬೆಳಗಾವಿಯಲ್ಲಿ ನಡೆಯಲಿದೆ. ಬರಗಾಲದ ಸಂಕಷ್ಟದಲ್ಲಿರುವ ರೈತರು ಪ್ರತಿ ಟನ್ ಕಬ್ಬಿಗೆ 1500 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡುವಂತೆ ಒತ್ತಾಯಿಸಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರ ಕಷ್ಟಗಳ ನಡುವೆ, ಈ ಸಭೆಯ ನಿರ್ಧಾರ ರೈತರ ಮುಂದಿನ ಹೋರಾಟದ ಹಾದಿ ನಿರ್ಧರಿಸಲಿದೆ.

ಕಬ್ಬು ಕಿಚ್ಚು: ಬೆಳೆಗಾರರು, ಫ್ಯಾಕ್ಟರಿ ಮಾಲೀಕರೊಂದಿಗೆ ನಾಳೆ ಸಿಎಂ ಹೈವೋಲ್ಟೇಜ್ ಸಭೆ
ಕಬ್ಬು ಬೆಳೆಗಾರರ ಪ್ರತಿಭಟನೆ
ಈರಣ್ಣಾ ಬಸವಾ
| Edited By: |

Updated on: Oct 25, 2026 | 7:02 PM

Share

ಬೆಂಗಳೂರು, ಅಕ್ಟೋಬರ್​​ 25: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ ನೀಡಿದ್ದರೂ, ರೈತರ ಪ್ರಮುಖ ಬೇಡಿಕೆಗಳು ಇನ್ನೂ ಈಡೇರಿಲ್ಲ. ಕಬ್ಬು ಬೆಳೆಗಾರರದ್ದು, ಹಲವು ಬೇಡಿಕೆ ಇದ್ದರೂ, ಅದರಲ್ಲಿ ಪ್ರಮುಖವಾಗಿ ರಾಜ್ಯ ಸರ್ಕಾರದಿಂದ ಪ್ರತಿ ಟನ್ ಕಬ್ಬಿಗೆ ಒಂದು ಸಾವಿರ ರೂ ಹೆಚ್ಚುವರಿ ಪ್ರೋತ್ಸಾಹ ಧನ ಮತ್ತು ಕಾರ್ಖಾನೆಗಳಿಂದ 500 ರೂ ಹೆಚ್ಚುವರಿ ಹಣ ಕೊಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ವಿಷಯಕ್ಕೆ ರೈತರು ಬೆಳಗಾವಿಯಿಂದ ಧಾರವಾಡ ಚಲೋ ಆರಂಭಿಸಿದ್ದರು. ಕೊನೆಗೆ ಸಿಎಂ ಮಧ್ಯ ಪ್ರವೇಶ ಮಾಡಿ ಶೀಘ್ರದಲ್ಲೇ ಸಭೆ ಕರೆಯೋದಾಗಿ ತಿಳಿಸಿದ್ದರು, ಇದೀಗ ಆ ಸಮಯ ನಿಗದಿಯಾಗಿದೆ.

ನಾಳೆ ಹೈವೋಲ್ಟೇಜ್ ಸಭೆ

ಬೆಳಗಾವಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ರೈತರು ಕುತೂಹಲದಿಂದ ನೋಡುತ್ತಿದ್ದ ಆ ಘಳಿಗೆ ಬಂದಿದೆ. ಕಿತ್ತೂರಿನಲ್ಲಿ ನೀಡಿದ್ದ ಭರವಸೆಯಂತೆ ಸಿಎಂ ಡಿ.ಕೆ. ಶಿವಕುಮಾರ್, ನಾಳೆ (ಅ.26) ರೈತ ಮುಖಂಡರು, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಿಎಂ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚಿಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಹೋರಾಟದ ಮುಂದಿನ ಹಾದಿಯನ್ನು ನಿರ್ಧರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಬ್ಬು ಬೆಳೆಗಾರರಿಗೆ ವಿಜಯದಶಮಿ ದಿನ ಗುಡ್​ ನ್ಯೂಸ್​: ಸಕ್ಕರೆ ವಲಯದ ಹೊಸ ಮಾರ್ಗಸೂಚಿ ರೂಪಿಸಲು ಚಿಂತನೆ

ರಾಜ್ಯದಲ್ಲಿ ತೀವ್ರ ಬರ ಹೊಡೆತ ಕೊಟ್ಟಿದೆ. ಬರದಿಂದ ಕಬ್ಬು ಬೆಳೆಗಾರರಿಗೆ ಸಂಕಷ್ಟ ಎದುರಿಸಿದ್ದರು. ಈ ಬಾರಿ ಮಳೆ ಕೊರತೆ ಮತ್ತು ಅಂತರ್ಜಲ ಕುಸಿತದಿಂದ ಹಲವು ಪ್ರದೇಶಗಳಲ್ಲಿ ಕಬ್ಬಿನ ಬೆಳೆ ಒಣಗುತ್ತಿದೆ. ಬೋರ್‌ವೆಲ್‌ಗಳಲ್ಲಿ ನೀರು ಕಡಿಮೆಯಾಗಿರುವುದರಿಂದ ಬೆಳೆ ಉಳಿಸಿಕೊಳ್ಳುವುದೇ ರೈತರಿಗೆ ಸವಾಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಬ್ಬಿನ ದರದ ಬಗ್ಗೆ ತ್ವರಿತ ನಿರ್ಧಾರ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ. ಪ್ರತಿ ಟನ್‌ಗೆ 5,500 ರೂ ನೀಡುವುದು ಕಾರ್ಖಾನೆಗಳಿಗೆ ಕಷ್ಟವಾಗಬಹುದು ಅಂತ ಸಕ್ಕರೆ ಕಾರ್ಖಾನೆ ಮಾಲೀಕರ ಅಭಿಪ್ರಾಯ ಆಗಿದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ ಪರಿಹಾರ ಕಂಡುಕೊಳ್ಳಬೇಕು ಅಂತ ಮಾಲೀಕರು ಆಗ್ರಹಿಸುತ್ತಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು 

ಈಗಾಗಲೇ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಪತ್ರ ವಾರ್ ನಡೆದಿತ್ತು. ಈದೀಗ ರಾಜ್ಯ ಸರ್ಕಾರ ಖುದ್ದು ರೈತರು ಮತ್ತು ಫ್ಯಾಕ್ಟರಿ ಮಾಲೀಕರೊಂದಿಗೆ ಚರ್ಚಿಸಲು ಮುಂದಾಗಿದೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್​​ ಪ್ರತಿಕ್ರಿಯಿಸಿದ್ದು, ‘ನಾಳೆ ಬೆಳಗಾವಿಯಲ್ಲಿ ಸಭೆ ಕರೆಯಲಾಗಿದೆ. ಮೊದಲು ಸಕ್ಕರೆ ವಿಚಾರ ಮಾತಾಡೋಣ ಅಂತ ಹೇಳಿದ್ದೆ. ರೈತರ ಜೊತೆ ಮೊದಲು ಮಾತನಾಡುತ್ತೇನೆ. ಕೇಂದ್ರ ಸಚಿವರು ಬರುತ್ತೇನೆ ಅಂತ ಹೇಳಿದ್ದರು. ಆದರೆ ಅವರಿಗೆ ಬೇರೆ ಕೆಲಸ ಇರಬೇಕು ಅಂತ ಕಾಣಿಸುತ್ತೆ. ಎಲ್ಲಾ ರಾಜ್ಯಗಳಲ್ಲೂ ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ಕಬ್ಬು ಅರೆಯಬೇಕು ಎಂಬ ಒತ್ತಡ ಇದೆ. ರೈತರ ಬಳಿ‌ ಮಾತನಾಡುತ್ತೇನೆ. ಆ ಭಾಗದ ಸಚಿವರು, ಶಾಸಕರನ್ನ ಸಭೆಗೆ ಕರೆದಿದ್ದು, ಅವರೊಂದಿಗೆ ಮಾತನಾಡುತ್ತೇನೆ’ ಎಂದು ಹೇಳಿದ್ದಾರೆ.

ಕಬ್ಬು ಬೆಳೆಗಾರರ ವಿಚಾರದಲ್ಲಿ ಡಿಕೆ ಶಿವಕುಮಾರ್​ ಕಪಟ ನಾಟಕವಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್​ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ‘ಸಿಎಂ ಡಿಕೆ ಶಿವಕುಮಾರ್ ಅವರು ಕಬ್ಬು ಬೆಳಗಾರರ ವಿಚಾರದಲ್ಲಿ ಕಪಟ ನಾಟಕವಾಡುತ್ತಿದ್ದಾರೆ. ದೆಹಲಿಗೆ ಹೋಗಿ ಇವೆಲ್ಲವೂ ಕೇಂದ್ರದ ಜವಾಬ್ದಾರಿ ಅಂತ ನಾಟಕವಾಡಿದರು, ರಾಜ್ಯದ ಪಾಲು ಏನೂ ಇಲ್ಲ ಅಂದರು. ಕಬ್ಬು ಬೆಳಗಾರರಿಂದ, ಸಕ್ಕರೆ ಕಾರ್ಖಾನೆಗಳಿಂದ ಅತೀ ಹೆಚ್ಚು ತೆರಿಗೆ  ರಾಜ್ಯ ಸರ್ಕಾರಕ್ಕೆ ಬರುತ್ತಿದೆ. ಬೆರೆ ಬೇರೆ ರಾಜ್ಯಗಳು ಕಬ್ಬು ಬೆಳೆಗಾರರಿಗೆ ಎಸ್ಎಪಿ ಕೊಟ್ಟಿವೆ. ಹಾಗೆ ಕರ್ನಾಟಕ ಸರ್ಕಾರ ಸಹ ಕಬ್ಬು ಬೆಳಗಾರಿಗೆ ಬೆಂಬಲ ಬೆಲೆ ಕೊಡಬೇಕು, ದರ ಹೆಚ್ಚಳ ಮಾಡಬೇಕು. ರಾಜ್ಯ ಸರ್ಕಾರ ಕಬ್ಬು ಬೆಳಗಾರರ ರಕ್ಷಣೆಗೆ ಬರಬೇಕು. ಎಲ್ಲವೂ ಕೇಂದ್ರದ ಜವಾಬ್ದಾರಿ ಅಂತ ಸಿಎಂ​ ಕೈತೊಳೆದುಕೊಳ್ಳಲು ಹೊರಟಿದ್ದಾರೆ. ಕಬ್ಬು ಬೆಳಗಾರರ ವಿಚಾರದಲ್ಲಿ ರಾಜಕೀಯ ಬಿಟ್ಟು ತೀರ್ಮಾನ ತೆಗೆದುಕೊಳ್ಳಬೇಕು’ ಅಂತ ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್​​ ಪತ್ರ

ಸದ್ಯ ನಾಳೆಯ ಸಭೆಯಲ್ಲಿ ಸರ್ಕಾರ ರೈತರಿಗೆ ತೃಪ್ತಿಕರವಾದ ದರ ಘೋಷಿಸುತ್ತಾ ಅನ್ನೋದು ಪ್ರಶ್ನೆಯಾಗಿದೆ. ಬೇಡಿಕೆಗಳಿಗೆ ಸ್ಪಷ್ಟ ಪರಿಹಾರ ಸಿಕ್ಕರೆ ಹೋರಾಟ ತಣ್ಣಗಾಗಬಹುದು. ಇಲ್ಲದಿದ್ರೆ ನಿರೀಕ್ಷಿತ ನಿರ್ಧಾರ ಹೊರಬರದಿದ್ದರೆ ರೈತರು ಮತ್ತೆ ಪ್ರತಿಭಟನೆಯ ಹಾದಿ ಹಿಡಿಯುವ ಸಾಧ್ಯತೆಯಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್