ಕಬ್ಬು ಬೆಳೆಗಾರರ ಹೋರಾಟ: ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಚರ್ಚೆಯಾಗಿದ್ದೇನು?

Updated By: ಪ್ರಸನ್ನ ಹೆಗಡೆ

Updated on: Nov 07, 2025 | 3:03 PM

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಬ್ಬಿನ ಬೆಲೆ ನಿಗದಿ ಬಗ್ಗೆ ತೀವ್ರ ಹಗ್ಗಜಗ್ಗಾಟ ನಡೆದಿದೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿಗಳ ಬೇಡಿಕೆ ಮುಂದಿಟ್ಟರೆ, ಸಕ್ಕರೆ ಕಾರ್ಖಾನೆ ಮಾಲೀಕರು ನಷ್ಟದ ಭೀತಿಯಿಂದ 3,200 ರೂಪಾಯಿಗಿಂತ ಹೆಚ್ಚು ನೀಡಲು ನಿರಾಕರಿಸಿದ್ದಾರೆ. ಸರ್ಕಾರವು 3,300 ರೂಪಾಯಿಗಳಿಗೆ ಹೊಂದಾಣಿಕೆ ಮಾಡಲು ಪ್ರಯತ್ನಿಸಿದೆ ಎನ್ನಲಾಗಿದೆ.

ಬೆಂಗಳೂರು, ನವೆಂಬರ್​ 07: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ತೀವ್ರ ಹಗ್ಗಜಗ್ಗಾಟ ನಡೆದಿದೆ. ರೈತರು ಪ್ರತಿ ಟನ್ ಕಬ್ಬಿಗೆ 3,500 ರೂಪಾಯಿಗಳ ಬೆಲೆಗೆ ಆಗ್ರಹಿಸಿದ್ದಾರೆ. ಆದರೆ, ಸಕ್ಕರೆ ಕಂಪನಿ ಮಾಲೀಕರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, 3,500 ರೂಪಾಯಿ ನೀಡಿದರೆ ಭಾರಿ ನಷ್ಟವಾಗುತ್ತದೆ ಎಂದು ವಾದಿಸಿದ್ದಾರೆ. ಈ ವೇಳೆ ಸರ್ಕಾರ ಮಧ್ಯಸ್ಥಿಕೆ ವಹಿಸಿ ಪ್ರತಿ ಟನ್‌ಗೆ 3,300 ರೂಪಾಯಿಗಳನ್ನು ನಿಗದಿಪಡಿಸಲು ಪ್ರಯತ್ನಿಸಿದೆ. ಆದರೂ ಕಾರ್ಖಾನೆಯವರು 3,200 ರೂಪಾಯಿಗಳಿಗಿಂತ ಹೆಚ್ಚು ನೀಡಲು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.