ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಎಸ್‌ಐಟಿಗೆ: ಸಚಿವ ನಾಗೇಂದ್ರ ಕಥೆ ಏನು?

ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕರ ಸಾವಿನ ಪ್ರಕರಣ ಹಲವು ಅನುಮಾನ ಹುಟ್ಟುಹಾಕಿದೆ. ಇದೆಲ್ಲರ ನಡುವೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಐಪಿಎಸ್‌ ಅಧಿಕಾರಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳ ಎಸ್‌ಐಟಿ ರಚನೆ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಎಸ್‌ಐಟಿಗೆ: ಸಚಿವ ನಾಗೇಂದ್ರ ಕಥೆ ಏನು?
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್ ಎಸ್‌ಐಟಿಗೆ: ಸಚಿವ ನಾಗೇಂದ್ರ ಕಥೆ ಏನು?
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:May 31, 2024 | 6:18 PM

ಬೆಂಗಳೂರು, ಮೇ 31: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚನೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಬೆನ್ನಲ್ಲೇ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊಡಿಸಲಾಗಿದೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ನಾಲ್ವರು ಐಪಿಎಸ್‌ ಅಧಿಕಾರಿಗಳೊಂದಿಗೆ ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ವರದಿ ಆಧರಿಸಿಯೇ ಸಚಿವ ಬಿ.ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ SIT ವರದಿ ಬರುವವರೆಗೆ ಕಾದು ನೋಡಲು ಸರ್ಕಾರ ತೀರ್ಮಾನ ಮಾಡಿದೆ.

ಅಂತಾರಾಜ್ಯಕ್ಕೆ ಹಣ ವರ್ಗಾವಣೆ ಆಗಿದ್ದರೆ ಸಿಬಿಐ ತನಿಖೆ ಅನಿವಾರ್ಯ. ಅಂತಾರಾಜ್ಯ ಹಣ ವರ್ಗಾವಣೆಯಲ್ಲಿ ಎಸ್​ಐಟಿ ತನಿಖೆ ಮಾಡಲು ಆಗಲ್ಲ. ಆಗ ಅನಿವಾರ್ಯವಾಗಿ ಸಿಬಿಐ ಅಧಿಕಾರಿಗಳು ಎಂಟ್ರಿ ಕೊಡಬೇಕಾಗುತ್ತೆ. ಈ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಎಸ್ಐಟಿ ರಚನೆಗೆ ಸರ್ಕಾರದ ನಿರ್ಧಾರ ಮಾಡಿದೆ.

ಸಚಿವ ತಾತ್ಕಾಲಿಕ ಸೇಫ್

ಪ್ರಕರಣ ವಿಚಾರವಾಗಿ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದ ಸಚಿವ ಬಿ.ನಾಗೇಂದ್ರ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ಪಾತ್ರ ಏನೂ ಇಲ್ಲ ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ. ಡೆತ್​ನೋಟ್​ನಲ್ಲಿ ಪದ್ಮನಾಭ್ ಹೆಸರಿದ್ದು ಸಚಿವರು ಎಂದು ಬಳಸಲಾಗಿದೆ ಆದರೆ ಇದರಲ್ಲಿ ನನ್ನ ಪಾತ್ರ ಇಲ್ಲ, ಈಗಾಗಲೇ ಈ ಬಗ್ಗೆ ಸ್ಪಷ್ಟಪಡಿಸಿದ್ದೀನಿ. ಯಾವುದೇ ಮೌಖಿಕ ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಬಳಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಅಧೀಕ್ಷಕ ಆತ್ಮಹತ್ಯೆ ಕೇಸ್​​: ಡೆತ್‌ನೋಟ್‌ನಲ್ಲಿ ನಿರ್ದಿಷ್ಟ ಸಚಿವರ ಹೆಸರಿಲ್ಲ, ಕ್ರಮ ಕೈಗೊಳ್ಳಲು ಬರಲ್ಲ: ಜಿ.ಪರಮೇಶ್ವರ್

ಇನ್ನೊಂದೆಡೆ ಸಿಐಡಿ ವರದಿಗಾಗಿ ಸಿಎಂ ಸಿದ್ದರಾಮಯ್ಯ ಕಾದು ಕೂತಿದ್ದಾರೆ. ಪ್ರಾಥಮಿಕ ವರದಿ ಆಧರಿಸಿ ಮುಂದಿನ ಕ್ರಮಕ್ಕೆ ನಿರ್ಧರಿಸಲಿದ್ದಾರೆ. ಸದ್ಯ ತೆಲಂಗಾಣ ಸರ್ಕಾರದ ಜೊತೆ ರಾಜ್ಯ ಸರ್ಕಾರ ಸಂಪರ್ಕದಲ್ಲಿದೆ. ತೆಲಂಗಾಣ ಸಹಕಾರ ಇಲಾಖೆಯಿಂದ ಮಾಹಿತಿ ಕೋರಲಾಗಿದೆ.

ಇದನ್ನೂ ಓದಿ: ಮೃತ ಚಂದ್ರಶೇಖರನ್ ಮನೆಗೆ ಭೇಟಿ ನೀಡಿ ಅವರ ಪತ್ನಿ ಮತ್ತು ಮಕ್ಕಳಿಗೆ ಸಾಂತ್ವನ ಹೇಳಿದ ಬಿವೈ ವಿಜಯೇಂದ್ರ

ಯೂನಿಯನ್ ಬ್ಯಾಂಕ್​ನಿಂದ ಸಹಕಾರಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದೆ. ಈ ಖಾತೆಗಳು ಹಾಗೂ ಬ್ಯಾಂಕ್​ಗಳ ವಿವರವನ್ನು ರಾಜ್ಯ ಸರ್ಕಾರ ಕೇಳಿದೆ. ಜೊತೆಗೆ ಸಹಕಾರಿ ಬ್ಯಾಂಕ್​ಗಳ ಖಾತೆ ಜಪ್ತಿ ಮಾಡುವಂತೆ ಮನವಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:17 pm, Fri, 31 May 24