ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ. ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

ಸುಳ್ವಾಡಿ ವಿಷ ಪ್ರಸಾದ: ಪ್ರಮುಖ ಆರೋಪಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ಕಿಚ್ಚುಗುತ್ತಿ ಮಾರಮ್ಮ ದೇಗುಲ ಮತ್ತು ಆರೋಪಿ ಇಮ್ಮಡಿ ಮಹದೇವ ಸ್ವಾಮಿ
ಸಾಧು ಶ್ರೀನಾಥ್​

Updated on: Dec 02, 2019 | 5:52 PM

ದೆಹಲಿ: ಸುಳ್ವಾಡಿ ದೇಗುಲದಲ್ಲಿ ವಿಷ ಪ್ರಸಾದ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಾಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ನಿರಾಕರಿಸಿದೆ.

ಕಳೆದ ವರ್ಷ ಚಾಮರಾಜನಗರದ ಹನೂರಿನ ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ವಿಷ ಪ್ರಸಾದದಿಂದ 17 ಜನರ ಮೃತಪಟ್ಟಿದ್ದರು ಮತ್ತು 120 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು.

Published On - 5:50 pm, Mon, 2 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us