AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?
ಸುಮಲತಾ ಅಂಬರೀಶ್
ರಾಜೇಶ್ ದುಗ್ಗುಮನೆ
|

Updated on:Dec 11, 2020 | 1:20 PM

Share

ಬೆಂಗಳೂರು: ದೆಹಲಿಯಲ್ಲಿಂದು ಹೊಸ ಸಂಸತ್ ಭವನ ನಿರ್ಮಾಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಅನೇಕ ಸಂಸದರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಡ್ಯ ಸಂಸದೆ ಸುಮಲತಾ ಅಂಬರೀಶ್​ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.

2022ರ ವೇಳೆಗೆ ಹೊಸ ಸಂಸತ್‌ ಕಟ್ಟಡ ನಿರ್ಮಾಣಗೊಳ್ಳುವ ನಿರೀಕ್ಷೆಯಿದೆ. ಭವನದದ ನಿರ್ಮಾಣದಲ್ಲಿ ಸುಮಾರು 2,000 ಕಾರ್ಮಿಕರು 861.90 ಕೋಟಿ ವೆಚ್ಚ ತಗುಲಲಿದೆ. ಈ ಕಟ್ಟಡದ ಶಂಕುಸ್ಥಾಪನೆಯನ್ನು ಮೋದಿ ಇಂದು ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ 200 ಅತಿಥಿಗಳು ಪಾಲ್ಗೊಂಡಿದ್ದರು. ಸುಮಲತಾ ಕೂಡ ಇದರಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಇದರ ಜೊತೆ ಸಾಕಷ್ಟು ವಿಡಿಯೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ.

Posted by Sumalatha Ambareesh on Thursday, December 10, 2020

ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆಯ ನೆರವೇರಿದ ಅಮೃತಘಳಿಗೆಯ ದೃಶ್ಯಗಳು. ????

Posted by Sumalatha Ambareesh on Thursday, December 10, 2020

ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಸಭೆಯನ್ನ ಉದ್ದೇಶಿಸಿ ಮಾತನಾಡಿದ ಮಾನ್ಯ ಪ್ರಧಾನ ಮಂತ್ರಿ ಶ್ರೀ. ನರೇಂದ್ರ ಮೋದಿ.

Posted by Sumalatha Ambareesh on Thursday, December 10, 2020

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ನೆರವೇರಿದ ಐತಿಹಾಸಿಕ ಘಳಿಗೆಯ ನಂತರ ಲೋಕಸಭೆಯ ಮಾನ್ಯ ಸ್ಪೀಕರ್ ಆದ ಶ್ರೀ. ಓಂ ಬಿರ್ಲಾ ಅವರೊಂದಿಗಿನ ಕ್ಷಣಗಳು. ಅವರ ಸರಳ ಸಜ್ಜನಿಕೆಯ ವ್ಯಕ್ತಿತ್ವ ಸದಾ ಆದರ್ಶಪ್ರಾಯ.

Posted by Sumalatha Ambareesh on Thursday, December 10, 2020

ಹೊಸ ಸಂಸತ್​ ಭವನಕ್ಕೆ ಶಂಕುಸ್ಥಾಪನೆ: ಕನ್ನಡ ನಾಡಿನ ಅನುಭವ ಮಂಟಪ ನೆನೆದ ಪ್ರಧಾನಿ ನರೇಂದ್ರ ಮೋದಿ

Published On - 9:36 pm, Thu, 10 December 20

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ