ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ನಡುವೆ ಮಾತಿನ ಸಮರ ನಡೆಯುತ್ತಿದೆ. ಮಾತಿನ ಸಮರ ನಡೆಸುತ್ತಿದ್ದ ಮಂಡ್ಯ ಸಂಸದೆ ಸುಮಲತಾ ಈಗ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸತ್ಯದ ಪರ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಮಹಿಳೆಯರು ಅಧಿಕಾರದಲ್ಲಿದ್ದರೆ ಕೆಲವರು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ ಎಂದು ಟ್ವಿಟ್ಟರ್ನಲ್ಲಿ ಮಂಡ್ಯ ಸಂಸದೆ ಸುಮಲತಾ ವಾಗ್ದಾಳಿ ನಡೆಸಿದ್ದಾರೆ.
ವೆಂಕಟೇಶ್ ನಿವಾಸಕ್ಕೆ ಮುತ್ತಿಗೆ
ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಜಟಾಪಟಿ ತಾರಕ್ಕೇರಿದ್ದು, ಅಭಿಮಾನಿಗಳ ನಡುವೆ ಜಗಳ ಆರಂಭವಾಗಿದೆ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಸುಮಲತಾ ಆಪ್ತ ರಾಕ್ಲೈನ್ ವೆಂಕಟೇಶ್ ನಿವಾಸಕ್ಕೆ ಇಂದು (ಜುಲೈ 10) ಬೆಳ್ಳಂಬೆಳಗ್ಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.
ಸುಮಲತಾ ನಿವಾಸಕ್ಕೆ ಪೊಲೀಸರಿಂದ ಭದ್ರತೆ
ಸುಮಲತಾ ಮನೆಗೂ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಯಿದ್ದು, ಬೆಂಗಳೂರಿನ ಜೆ.ಪಿ.ನಗರದ ಸುಮಲತಾ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಜೆ.ಪಿ.ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸೇರಿದಂತೆ ಸುತ್ತಮುತ್ತಲಿನ ಠಾಣೆಗಳ 30ಕ್ಕೂ ಹೆಚ್ಚು ಪೊಲೀಸರು ಭದ್ರತೆ ನೀಡಿದ್ದಾರೆ. ಸುಮಲತಾ ಮನೆಯ ಎರಡೂ ಕಡೆ ಬ್ಯಾರಿಕೇಡ್ನ ಅಳವಡಿಸಿದ್ದಾರೆ.
ಶುಭೋದಯ ?
ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳಲಾರರು. ಭ್ರಷ್ಟರು, ನಿಷ್ಠಾವಂತ ಅಧಿಕಾರಿಗಳಿಗೆ ವರ್ಗಾವಣೆ, ಒತ್ತಡ, ಕಿರುಕುಳ ಕೊಡಬಲ್ಲರು. ಪಾಪ ಸಂಸದರನ್ನು ವರ್ಗಾವಣೆ ಮಾಡಲು ಬರುವುದಿಲ್ಲ!#SaveKRSDam#StopIllegalMining— Sumalatha Ambareesh ?? ಸುಮಲತಾ ಅಂಬರೀಶ್ (@sumalathaA) July 10, 2021
ಇದನ್ನೂ ಓದಿ
ಕೆಆರ್ಎಸ್ ಡ್ಯಾಂ ಬಿರುಕು ವಿವಾದ: ಸಿಬಿಐ ತನಿಖೆ ನಡೆಸುವಂತೆ ಸಿಎಂ ಯಡಿಯೂರಪ್ಪಗೆ ಸುಮಲತಾ ಒತ್ತಾಯ
(Sumalatha react in twitter that corrupt would disturb the loyal authorities)
Published On - 12:01 pm, Sat, 10 July 21