AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ

ಶ್ರೀರಂಗಪಟ್ಟಣ ತಾಲ್ಲೂಕು ಚೆನ್ನನಕೆರೆ ಗಣಿಗಾರಿಕೆ ಪ್ರದೇಶಕ್ಕೆ ಸಂಸದೆ ಸುಮಲತಾ ಅಂಬರೀಷ್ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಮಲತಾ
ಸುಮಲತಾ ಅಂಬರೀಷ್​ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 07, 2021 | 5:13 PM

Share

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಚೆನ್ನನಕೆರೆ ಗಣಿಗಾರಿಕೆ ಪ್ರದೇಶಕ್ಕೆ ಸಂಸದೆ ಸುಮಲತಾ ಅಂಬರೀಷ್ ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು. ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ ನಂತರ ತಮ್ಮ ಜೊತೆಗೆ ಬಂದಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳನ್ನು ಸುಮಲತಾ ತರಾಟೆಗೆ ತೆಗೆದುಕೊಂಡರು.

ಎಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ನಿಮಗೆ ತಿಳಿದಿಲ್ಲವೇ? ನಾನು ಬಂದು ತೋರಿಸಬೇಕೆ? ಅಕ್ರಮ ಮಾಡಿದವರ ವಿರುದ್ಧ ಎಷ್ಟು ಫೈನ್ ಹಾಕಿದ್ದೀರಿ? ಏನು ಕ್ರಮ ಆಗಿದೆ ಎಂದು ಪ್ರಶ್ನಿಸಿದರು.

ನಿನ್ನೆ ಇಲ್ಲಿ ಗಣಿಗಾರಿಕೆ ಚಟುವಟಿಕೆ ನಡೆದಿರುವ ಗುರುತು ಕಾಣಿಸುತ್ತಿದೆ. ದೊಡ್ಡ ದೊಡ್ಡ ಟ್ರಕ್‌ಗಳು ಓಡಾಡಿರುವ ಗುರುತು ಕಾಣಿಸುತ್ತಿದೆ. ಇಲ್ಲಿ ಏನೂ ನಡೆಯುತ್ತಿಲ್ಲ ಎಂದು ಸಭೆಗಳಲ್ಲಿ ಹೇಳುತ್ತೀರಿ. ಆದರೆ ವಾಸ್ತವ ಬೇರೆಯೇ ಇದೆ ಎಂದು ಆಕ್ಷೇಪಿಸಿದರು.

ಗ್ರಾಮಕ್ಕೆ ಭೇಟಿ ನೀಡಿದ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿದ ಗ್ರಾಮಸ್ಥರು ವಿವಿಧ ಬೇಡಿಕೆ ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಿದರು. ಕೆರೆಗೆ ನೀರು ತುಂಬಿಸಬೇಕಿದೆ, ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ ಎಂದು ವಿನಂತಿಸಿದರು.

ಚೆನ್ನನಕೆರೆ ಗ್ರಾಮದ ಬಳಿ ದಾರಿಗೆ ಅಡ್ಡ ಗಣಿ ಮಾಲೀಕರು ಮಣ್ಣು ಹಾಕಿರುವುದುನ್ನು ಗಮನಿಸಿದರು. ದಾರಿಗೆ ಅಡ್ಡಲಾಗಿ ಹಾಕಿರುವ ಮಣ್ಣು ಹತ್ತಿ, ನಡೆದುಕೊಂಡು ಹೋಗಿಯೇ ಗಣಿ ವೀಕ್ಷಿಸಿದರು. ಸಂಸದೆ ಸುಮಲತಾ ಅವರೊಂದಿಗೆ ಜಿಲ್ಲಾಧಿಕಾರಿ ಅಶ್ವತಿ, ಜಿಲ್ಲಾ ಗಣಿ ಅಧಿಕಾರಿ ಪದ್ಮಜಾ ಸೇರಿ ಹಲವರು ಉಪಸ್ಥಿತರಿದ್ದರು.

(Sumalatha Warns Mining Department Officials About Chennanakere Mining)

ಇದನ್ನೂ ಓದಿ: ಕುತಂತ್ರಿಗಳು ನಮ್ಮ ಕುಟುಂಬ ಒಡೆಯೋಕೆ ಸಾಧ್ಯವಿಲ್ಲ; ನನ್ನ ರಾಜಕಾರಣವನ್ನು ಮಂಡ್ಯದಲ್ಲೇ ತೋರಿಸುವೆ: ಸುಮಲತಾ ವಿರುದ್ಧ ಕುಮಾರಸ್ವಾಮಿ ಗರಂ

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ ಸುಮಲತಾ ಖುದ್ದು ‘ಟಾರ್ಗೆಟ್​’ ಭೇಟಿ; ಜೆಡಿಎಸ್​ ದಳಪತಿಗಳು ಸಿಡಿಮಿಡಿ

Published On - 5:12 pm, Wed, 7 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!