ಸುಮನಹಳ್ಳಿ ಚಿತಾಗಾರ ಬಂದ್: ಇಂದಿನಿಂದ ಏಳು ದಿನಗಳ ಕಾಲ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಂತ್ಯಕ್ರಿಯೆ ಸ್ಥಗಿತ

ಇಂದಿನಿಂದ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸ್ಥಗಿತಗೊಳ್ಳುತ್ತಿದ್ದು, ತುರ್ತು ನಿರ್ವಹಣಾ ಕೆಲಸ ಹಿನ್ನೆಲೆ 7 ದಿನಗಳ ಕಾಲ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಫರ್ನೇಸ್​ಗಳನ್ನು ಬದಲಾಯಿಸುವ ಸಲುವಾಗಿ ಮೇ 4ರಿಂದ ಮೇ 10ರವರೆಗೆ ಅಂತ್ಯಕ್ರಿಯೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ.

ಸುಮನಹಳ್ಳಿ ಚಿತಾಗಾರ ಬಂದ್: ಇಂದಿನಿಂದ ಏಳು ದಿನಗಳ ಕಾಲ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಂತ್ಯಕ್ರಿಯೆ ಸ್ಥಗಿತ
ಚಿತಾಗಾರ (ಪ್ರಾತಿನಿಧಿಕ ಚಿತ್ರ)
Follow us
Skanda
| Updated By: ಆಯೇಷಾ ಬಾನು

Updated on: May 04, 2021 | 7:29 AM

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಕರ್ನಾಟಕದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಚಿತಾಗಾರಗಳ ಮುಂದೆ ಸಾಲು ಸಾಲು ಮೃತದೇಹಗಳು ಕಾಣುವ ದೃಶ್ಯವೂ ಸರ್ವೇಸಾಮಾನ್ಯವಾಗಿದ್ದು, ಅಂತ್ಯಸಂಸ್ಕಾರಕ್ಕೂ ಪರದಾಡಬೇಕಾದ ದುಸ್ಥಿತಿ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಶವ ಸಂಸ್ಕಾರ ಮಾಡಲಾಗುತ್ತಿರುವ ಕಾರಣ ಸುದ್ದಿಯಲ್ಲಿರುವ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಇದೀಗ ವಾರದ ಮಟ್ಟಿಗೆ ಅಂತ್ಯ ಸಂಸ್ಕಾರ ಕ್ರಿಯೆ ಸ್ಥಗಿತಗೊಳ್ಳುತ್ತಿದೆ.

ಇಂದಿನಿಂದ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸ್ಥಗಿತಗೊಳ್ಳುತ್ತಿದ್ದು, ತುರ್ತು ನಿರ್ವಹಣಾ ಕೆಲಸ ಹಿನ್ನೆಲೆ 7 ದಿನಗಳ ಕಾಲ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಫರ್ನೇಸ್​ಗಳನ್ನು ಬದಲಾಯಿಸುವ ಸಲುವಾಗಿ ಮೇ 4ರಿಂದ ಮೇ 10ರವರೆಗೆ ಅಂತ್ಯಕ್ರಿಯೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ.

SUMANAHALLI

ಮೇ 10ರ ತನಕ ಸುಮನಹಳ್ಳಿ ಚಿತಾಗಾರ ತಾತ್ಕಾಲಿಕ ಸ್ಥಗಿತ

ರೈಲ್ವೇ ನಿಲ್ದಾಣದಲ್ಲಿ ಜನಸಾಗರ, ಎಚ್ಚೆತ್ತುಕೊಳ್ಳದ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹಬ್ಬುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​ಡೌನ್ ಮಾದರಿಯ ಕರ್ಫ್ಯೂ ವಿಧಿಸಿದೆ. ಆದರೆ, ಕಳೆದ ಬಾರಿಯ ಲಾಕ್​ಡೌನ್​ ರೀತಿಯಲ್ಲಿ ಅತಿಯಾದ ಕಠಿಣ ನಿಯಮಗಳು ಜಾರಿಯಲ್ಲಿಲ್ಲವಾದ್ದರಿಂದ ಜನರು ಓಡಾಡುವುದನ್ನು ನಿಲ್ಲಿಸಿಲ್ಲ. ಅದರಲ್ಲೂ ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಹೋಗುವ ಪ್ರಯಾಣಿಕರು ಗುಂಪುಗುಂಪಾಗಿ ಜಮಾಯಿಸಿದ್ದು, ಕೊವಿಡ್ ನಿಯಮಾವಳಿಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ.

ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣಕ್ಕೆ ಗುಂಪು ಗುಂಪಾಗಿ ಆಗಮಿಸುತ್ತಿರುವ ಪ್ರಯಾಣಿಕರು ಕೊರೊನಾ ಬಗ್ಗೆ ಅತಿಯಾದ ನಿರ್ಲಕ್ಷ್ಯ ತೋರುತ್ತಿರುವುದು ಆತಂಕ ಮೂಡಿಸುತ್ತಿದೆ. ಕಠಿಣ ನಿಯಮಗಳನ್ನು ಜಾರಿಗೆ ತರುವುದಕ್ಕೇ ಮೀನಾಮೇಷ ಎಣಿಸಿದ ಸರ್ಕಾರ ಈಗ ಜನರು ನಿಯಮ ಉಲ್ಲಂಘನೆ ಮಾಡುತ್ತಿರುವಾಗಲೂ ಎಚ್ಚೆತ್ತುಕೊಳ್ಳದಿದ್ದರೆ ಈಗ ತಲೆದೋರಿರುವ ಸಂಕಷ್ಟ ಇನ್ನಷ್ಟು ಉಲ್ಬಣಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ: ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ 

ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ