ಕರ್ನಾಟಕದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ! ಕಾರಣ ಇಲ್ಲಿದೆ

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ಜನ ಬಸವಳಿದಿದ್ದಾರೆ. ಮಳೆಯೂ ಬರುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್​​ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಬೇಸಗೆ ವೇಳೆ ಇನ್ನು ವಕೀಲರು ಕಪ್ಪು ಕೋಟು ಧರಿಸಿದ್ದರೂ ನಡೆಯುತ್ತದೆ. ಆದರೆ, ಯಾವ ರೀತಿಯ ದಿರಿಸು ಧರಿಸಬೇಕು ಎಂಬ ಮಾರಗಸೂಚಿಯನ್ನೂ ಕೋರ್ಟ್​ ಬಿಡುಗಡೆ ಮಾಡಿದೆ. ವಿವರ ಇಲ್ಲಿದೆ.

ಕರ್ನಾಟಕದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ! ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
Ramesha M
| Updated By: Ganapathi Sharma

Updated on: Apr 17, 2024 | 7:30 AM

ಬೆಂಗಳೂರು, ಏಪ್ರಿಲ್ 17: ಏಪ್ರಿಲ್ 18 ರಿಂದ ಮೇ 31 ರವರೆಗೆ ರಾಜ್ಯಾದ್ಯಂತ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು (Black coat) ಧರಿಸುವುದರಿಂದ ಕರ್ನಾಟಕ ಹೈಕೋರ್ಟ್ (Karnataka High Court) ವಿನಾಯಿತಿ ನೀಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ / ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚುತ್ತಿದ್ದು, ತಾಪಮಾನವೂ ಹಲವು ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಹೀಗಾಗಿ ಇಂಥ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬರುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತದೆ. ಹೀಗಾಗಿ ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು.

ಮುಂದಿನ ಐದು ದಿನ ಹೆಚ್ಚಲಿದೆ ಉಷ್ಣಾಂಶ

ಈ ಮಧ್ಯೆ, ಮುಂದಿನ ಐದು ದಿನಗಳಲ್ಲಿ ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ, ಕೊಂಕಣ, ಸೌರಾಷ್ಟ್ರ ಮತ್ತು ಕಚ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಉಷ್ಣ ಮಾರುತ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಏ.17ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಬುಧವಾರ ಹಾಗೂ ಗುರುವಾರ ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆ, ಗುರುವಾರದಿಂದ ಗುಜರಾತ್‌ನ ಕರಾವಳಿ ಪ್ರದೇಶಗಳು ಮತ್ತು ಕೊಂಕಣ ಪ್ರದೇಶ, ಗೋವಾದಲ್ಲಿ ಗುರುವಾರದಿಂದ ಶನಿವಾರ ವರೆಗೆ ಬಿಸಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮಳೆ ನಿರೀಕ್ಷೆ

ಬೆಂಗಳೂರಿನಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಈ ಮಧ್ಯೆ, ತುಸು ನಿರಾಳವಾಗುವಂಥ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಗುರುವಾರ ಮತ್ತು ಶುಕ್ರವಾರದಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್