Summer: ರಾಜ್ಯದಲ್ಲಿ ಹೆಚ್ಚಿದ ಬೇಸಿಗೆ ಬೇಗೆ; ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ದಾಟಿದ ಗರಿಷ್ಠ ತಾಪಮಾನ

|

Updated on: Apr 18, 2023 | 10:05 PM

ಕಳೆದ ಕೆಲವು ವಾರಗಳಿಂದ ಕರ್ನಾಟಕದ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Summer: ರಾಜ್ಯದಲ್ಲಿ ಹೆಚ್ಚಿದ ಬೇಸಿಗೆ ಬೇಗೆ; ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ದಾಟಿದ ಗರಿಷ್ಠ ತಾಪಮಾನ
ಸಾಂದರ್ಭಿಕ ಚಿತ್ರ
Image Credit source: PTI
Follow us on

ಬೆಂಗಳೂರು: ಕಳೆದ ಕೆಲವು ವಾರಗಳಿಂದ ಕರ್ನಾಟಕದ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಅಂಕಿಅಂಶಗಳ ಪ್ರಕಾರ, ಕಲಬುರಗಿಯಲ್ಲಿ ಮಂಗಳವಾರ ಗರಿಷ್ಠ ಗರಿಷ್ಠ ತಾಪಮಾನ 41.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಗರಿಷ್ಠ ತಾಪಮಾನ 36.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರೊಂದಿಗೆ, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಮೂರು ಡಿಗ್ರಿ ಹೆಚ್ಚಾದಂತಾಗಿದೆ. ಕಲಬುರಗಿ ಹೊರತುಪಡಿಸಿ ರಾಯಚೂರು (41), ಬಳ್ಳಾರಿ (40) ಮತ್ತು ವಿಜಯಪುರ (40.4) ನಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಗುರುವಾರ ಚಿಕ್ಕಮಗಳೂರು, ಕೊಡಗು ಮತ್ತು ತುಮಕೂರು ಜಿಲ್ಲೆಗಳ ವಿವಿಧೆಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಹಾಗೂ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Karnataka Weather: ಕಲಬುರಗಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ ದಾಖಲು, ಯಾವ್ಯಾವ ಜಿಲ್ಲೆಗಳ ಹವಾಮಾನ ಹೇಗಿದೆ ಇಲ್ಲಿದೆ ಮಾಹಿತಿ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಕರ್ನಾಟಕದ ಒಳನಾಡಿನ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದೂ ಇಲಾಖೆ ತಿಳಿಸಿದೆ.

ಕಲಬುರಗಿಯಲ್ಲಿ ಏಪ್ರಿಲ್ 13ರಂದು 40.6 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲಾಗಿತ್ತು. ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಗರಿಷ್ಠ ಉಷ್ಣಾಂಶ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಗಲೇ ಹವಾಮಾನ ಇಲಾಖೆ ಹೇಳಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ