ಕನ್ನಡ ಪುಸ್ತಕ ಕೊಡಿ ಎಂದ ನೂತನ ಸಚಿವ ಸುನಿಲ್ ಕುಮಾರ್ ಈಗ ಕಲಾವಿದರೊಂದಿಗೆ ಕಾಫಿ ಕುಡಿಯಲಿದ್ದಾರೆ!

| Updated By: ganapathi bhat

Updated on: Aug 10, 2021 | 6:09 PM

Sunil Kumar: ಸುನಿಲ್ ಕುಮಾರ್, ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಸಿರಿಗನ್ನಡ ಪುಸ್ತಕ ಮಳಿಗೆಗೆ ಭೇಟಿ ನೀಡಿ ಪುಸ್ತಕ ಖರೀದಿಸುವುದರ ಮೂಲಕ ಕನ್ನಡ ಮತ್ತು ಸಂಸ್ಕೃತಿಯ ಕಲೆ ಮತ್ತು ಸಾಹಿತ್ಯದ ಸತ್ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ ಎಂದು ತಿಳಿಸಲಾಗಿದೆ.

ಕನ್ನಡ ಪುಸ್ತಕ ಕೊಡಿ ಎಂದ ನೂತನ ಸಚಿವ ಸುನಿಲ್ ಕುಮಾರ್ ಈಗ ಕಲಾವಿದರೊಂದಿಗೆ ಕಾಫಿ ಕುಡಿಯಲಿದ್ದಾರೆ!
ಸುನಿಲ್ ಕುಮಾರ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದ ಬಳಿಕ ಕೆಲವು ನೂತನ ಸಚಿವರು ಸುದ್ದಿಯಲ್ಲಿದ್ದಾರೆ. ಕಾರ್ಕಳ ಶಾಸಕ ಹಾಗೂ ಈಗ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ನೇಮಕರಾಗಿರುವ ಸುನಿಲ್ ಕುಮಾರ್ ಕೂಡ ವಿವಿಧ ಕಾರಣಗಳಿಂದ ಜನರ ಗಮನ ಸೆಳೆದಿದ್ದಾರೆ. ನೂತನ ಸಚಿವ ಸುನಿಲ್ ಕುಮಾರ್, ಬುಧವಾರ (ಆಗಸ್ಟ್ 11) ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ವಿ.ಸುನಿಲ್ ಕುಮಾರ್ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ. ಆ ಪ್ರಯುಕ್ತ ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಮತ್ತೊಂದು ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ.

ಸಚಿವ ಸುನಿಲ್ ಕುಮಾರ್, ಭಾರತಾಂಬೆ ಮತ್ತು ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಹಾಗೂ ನಾಡಗೀತೆಯ ಮೂಲಕ ಗೌರವ ಸಲ್ಲಿಸಿ, ಕನ್ನಡ ಭವನದ ಆವರಣದಲ್ಲಿ 2019- 20 ನೇ ಸಾಲಿನ ವಿವಿಧ ವಾರ್ಷಿಕ ಗೌರವ ಪ್ರಶಸ್ತಿ ಪಡೆದ ಇಬ್ಬರು ಗಣ್ಯರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಆ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯಾರಂಭ ಮಾಡಲಿದ್ದಾರೆ.

ನಂತರ ಸಚಿವರು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಸಿರಿಗನ್ನಡ ಪುಸ್ತಕ ಮಳಿಗೆಗೆ ಭೇಟಿ ನೀಡಿ ಪುಸ್ತಕ ಖರೀದಿಸುವುದರ ಮೂಲಕ ಕನ್ನಡ ಮತ್ತು ಸಂಸ್ಕೃತಿಯ ಕಲೆ ಮತ್ತು ಸಾಹಿತ್ಯದ ಸತ್ಸಂಪ್ರದಾಯಕ್ಕೆ ನಾಂದಿ ಹಾಡಲಿದ್ದಾರೆ ಎಂದು ತಿಳಿಸಲಾಗಿದೆ.

ಕಲಾವಿದರೊಂದಿಗೆ ಕಾಫಿ
ಪುಸ್ತಕ ಖರೀದಿ ಕಾರ್ಯಕ್ರಮದ ನಂತರ, ಸಚಿವ ಸುನಿಲ್ ಕುಮಾರ್, ಕಲಾಕ್ಷೇತ್ರದ ಆವರಣದಲ್ಲಿರುವ ಕ್ಯಾಂಟೀನ್​ನಲ್ಲಿ ಸಾಹಿತಿಗಳು ಮತ್ತು ಕಲಾವಿದರೊಂದಿಗೆ ಕಾಫಿ ಸೇವಿಸಲಿದ್ದಾರೆ. 10.15 ಕ್ಕೆ ಕನ್ನಡ ಭಾಷೆ, ಸಂಸ್ಕೃತಿಯ ಸಮರ್ಥ ರಾಯಭಾರಿಯಾಗಿ, ಕನ್ನಡಕುಲಕೋಟಿಯ ಆರಾಧ್ಯ ದೈವ ಎನಿಸಿರುವ ಡಾ. ರಾಜಕುಮಾರ್ ಅವರ ಸಮಾಧಿ ಇರುವ ಸ್ಥಳಕ್ಕೆ ಭೇಟಿ ಕೊಟ್ಟು ಪುಷ್ಪಾಂಜಲಿ ಮೂಲಕ ಗೌರವ ನಮನ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Sunil Kumar: ಆರ್​ಎಸ್​ಎಸ್​, ಎಬಿವಿಪಿ ಹಿನ್ನೆಲೆಯುಳ್ಳ ಸುನಿಲ್ ಕುಮಾರ್​ಗೆ ಲಭಿಸಿತು ಇಂಧನ ಖಾತೆ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ; ರಾಜ್ಯ ಸರ್ಕಾರ ಆದೇಶ

(Sunil Kumar to start work as Kannada Culture Minister of Karnataka Govt in a Unique Way)