ನಾಳೆ ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ: ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ, ಪ್ರತ್ಯೇಕ ಸಚಿವಾಲ ಬಗ್ಗೆ ಚರ್ಚೆ, ಸಿಎಂ

ನಾಳೆ ಕಲಬುರಗಿ ನಗರದಲ್ಲೇ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ. ಈ ಭಾಗದ ಎಲ್ಲಾ ನಿರೀಕ್ಷೆಗಳನ್ನ ಒಮ್ಮೆಲೆ ಮಾಡೋಕೆ ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ 5 ಸಾವಿರ ಕೋಟಿ ನೀಡಿದ್ದೇನೆ ಎಂದಿದ್ದಾರೆ.

ನಾಳೆ ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ: ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ, ಪ್ರತ್ಯೇಕ ಸಚಿವಾಲ ಬಗ್ಗೆ ಚರ್ಚೆ, ಸಿಎಂ
ನಾಳೆ ಕಲಬುರಗಿಯಲ್ಲಿ ಕ್ಯಾಬಿನೆಟ್ ಸಭೆ: ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ, ಪ್ರತ್ಯೇಕ ಸಚಿವಾಲ ಬಗ್ಗೆ ಚರ್ಚೆ, ಸಿಎಂ
Edited By:

Updated on: Sep 16, 2024 | 6:19 PM

ಕಲಬುರಗಿ, ಸೆಪ್ಟೆಂಬರ್​ 16: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಭಾಗದ ಎಲ್ಲಾ ನಿರೀಕ್ಷೆಗಳನ್ನ ಒಮ್ಮೆಲೆ ಮಾಡುವುದಕ್ಕೆ  ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಪರವಾಗಿದೆ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ರೂ. ಅನುದಾನ

ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದಿದ್ದಾರೆ.

ಇದನ್ನೂ ಓದಿ: ದಶಕದ ನಂತರ ಕಲ್ಯಾಣ ಕರ್ನಾಟಕದಲ್ಲಿ ಸಂಪುಟ ಸಭೆ: ಈ ಹಿಂದಿನ​ ನಿರ್ಣಯಗಳಲ್ಲಿ ಜಾರಿಯಾಗಿದ್ದೆಷ್ಟು? ಇಲ್ಲಿದೆ ಸಮಗ್ರ ಮಾಹಿತಿ

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣ ಬಗ್ಗೆ ಮಾತನಾಡಿದ್ದು, ನಾಗಮಂಗಲ ಶಾಂತವಾಗಿದೆ. ಯಾವುದೇ ಊಹಾಪೋಹ ಬೇಡ. ನಿರ್ಲಕ್ಷ್ಯ ವಹಿಸಿದ್ದ ಓರ್ವ ಇನ್ಸ್​ಪೆಕ್ಟರ್​ ಅಮಾನತು ಮಾಡಿದ್ದೇವೆ. ಓರ್ವ ಡಿವೈಎಸ್​ಪಿ ವರ್ಗಾವಣೆ ಮಾಡಿದ್ದೇವೆ. ರಾಜ್ಯದಲ್ಲಿ ಎಲ್ಲೂ ಹೊತ್ತಿ ಉರಿಯುತ್ತಿಲ್ಲ, ಎಲ್ಲೆಡೆ ಶಾಂತವಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us