ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ; ಪ್ರಕರಣದಿಂದ ಹಿಂದೆ ಸರಿದ ನ್ಯಾಯಮೂರ್ತಿ
ದೆಹಲಿ: ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಸೆ.23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅನರ್ಹತೆ ಆದೇಶ ಪ್ರಶ್ನಿಸಿ ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಇದೀಗ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಆದ್ದರಿಂದ ಕಾಂಗ್ರೆಸ್-ಜೆಡಿಎಸ್ನ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ. ಈಗ ಸುಪ್ರೀಂಕೋರ್ಟ್ ಪೀಠದ ಮರುರಚನೆಯಾಗಬೇಕಿದೆ. ಬೇರೆ ನ್ಯಾಯಮೂರ್ತಿಗಳ ಪೀಠಕ್ಕೆ ನೇಮಕವಾಗಬೇಕು. ಹೀಗಾಗಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆ […]
ದೆಹಲಿ: ದೋಸ್ತಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯನ್ನು ಸೆ.23ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅನರ್ಹತೆ ಆದೇಶ ಪ್ರಶ್ನಿಸಿ ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದ್ರೆ ಇದೀಗ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಆದ್ದರಿಂದ ಕಾಂಗ್ರೆಸ್-ಜೆಡಿಎಸ್ನ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆಯಾಗಿದೆ.
ಈಗ ಸುಪ್ರೀಂಕೋರ್ಟ್ ಪೀಠದ ಮರುರಚನೆಯಾಗಬೇಕಿದೆ. ಬೇರೆ ನ್ಯಾಯಮೂರ್ತಿಗಳ ಪೀಠಕ್ಕೆ ನೇಮಕವಾಗಬೇಕು. ಹೀಗಾಗಿ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ಮತ್ತಷ್ಟು ತಡವಾಗುವ ಸಾಧ್ಯತೆಯಿದೆ.
Published On - 12:26 pm, Tue, 17 September 19