ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠದಿಂದ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದುಡಿದೆ. ಈ ಹಿಂದೆ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ದೆಹಲಿ: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪದ ಮೇರೆಗೆ ಕಳೆದ ಮೂರು ತಿಂಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಂದೂಡಿದೆ.
ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಈ ಹಿಂದೆ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠಕ್ಕೆ ಈ ಕೇಸ್ ವರ್ಗಾವಣೆ ಆಗಿದ್ದು, ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸ್ಯಾಂಡಲ್ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ
Published On - 1:15 pm, Fri, 8 January 21