ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠದಿಂದ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದುಡಿದೆ. ಈ ಹಿಂದೆ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
Edited By: ಸಾಧು ಶ್ರೀನಾಥ್​

Updated on: Jan 08, 2021 | 5:29 PM

ದೆಹಲಿ: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪದ ಮೇರೆಗೆ ಕಳೆದ ಮೂರು ತಿಂಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಂದೂಡಿದೆ.

ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಈ ಹಿಂದೆ ನಟಿ ರಾಗಿಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ನಟಿ ರಾಗಿಣಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್‌ನ ಮತ್ತೊಂದು ಪೀಠಕ್ಕೆ ಈ ಕೇಸ್ ವರ್ಗಾವಣೆ ಆಗಿದ್ದು, ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ.

ಸ್ಯಾಂಡಲ್​ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ

Published On - 1:15 pm, Fri, 8 January 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us