AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಬಾಂಡ್‌: ಕೋರ್ಟ್​ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ಚಾಟಿ

ಚುನಾವಣಾ ಬಾಂಡ್‌ಗಳನ್ನ ಸುಪ್ರೀಂ ಕೋರ್ಟ್‌ ನಿಷೇಧಿಸಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್‌ ತೀರ್ಪನ್ನ ಸ್ವಾಗತಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ‌ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಚಾಟಿ ಬೀಸಿದ್ದರು. ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್​ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು ಎಂದಿದ್ದಾರೆ.

ಚುನಾವಣಾ ಬಾಂಡ್‌: ಕೋರ್ಟ್​ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ಚಾಟಿ
ಸಿಎಂ ಸಿದ್ದರಾಮಯ್ಯ
Anil Kalkere
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 15, 2024 | 10:23 PM

Share

ಬೆಂಗಳೂರು, ಫೆಬ್ರವರಿ 15: ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ ಎಂದು ಸುಪ್ರೀಂ ಕೋರ್ಟ್‌ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ವಾಗತಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್​​ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್​ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತಂದಿದ್ದು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿದೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ.

ಚುನಾವಣಾ ಬಾಂಡ್‌ಗಳು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಬಿಜೆಪಿ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು

ಈಗಾಗಲೇ ಚುನಾವಣಾ ಬಾಂಡ್​ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗ ಪಡಿಸಬೇಕೆಂದು ಹೇಳಿದೆ. ಇದರಿಂದ ಬಿಜೆಪಿ ಪಕ್ಷದ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್ ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು.

ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಔಟ್​ ಆಫ್​ ಔಟ್​​ ಗೆಲ್ಲೋಕೆ ಸಜ್ಜಾದ ಕೇಸರಿ‌ಪಡೆ… ಖರ್ಗೆ ಕೋಟೆ ಭೇದಿಸೋಕೆ ಮಾಸ್ಟರ್ ‌ಪ್ಲಾನ್, ಏನದು ರಣತಂತ್ರ?

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:23 pm, Thu, 15 February 24

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್