AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರ ಸದಸ್ಯತ್ವವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದರೊಂದಿಗೆ, ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಮಾನ್ಯತೆ ಕುರಿತು ನಡೆದ ಕಾನೂನು ಹೋರಾಟದಲ್ಲಿ ಅವರಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾದಂತಾಗಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ
ಉಪಸಭಾಪತಿ ಎಂಕೆ ಪ್ರಾಣೇಶ್ ಪರಿಷತ್ ಸದಸ್ಯತ್ವ ರದ್ದು: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾImage Credit source: tv9
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on:Jul 16, 2026 | 12:51 PM

Share

ಮುಖ್ಯಾಂಶಗಳು

  • ಪ್ರಾಣೇಶ್ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ
  • ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೊರೆಹೋಗಿದ್ದ ಪ್ರಾಣೇಶ್
  • ಪರಿಷತ್ ಸದಸ್ಯತ್ವ ರದ್ದು

ನವದೆಹಲಿ, ಜುಲೈ 16: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂಕೆ ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಭಾರೀ ಹಿನ್ನಡೆಯಾಗಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಅವರ ಸದಸ್ಯತ್ವವನ್ನು ರದ್ದುಪಡಿಸಲಾಗಿದೆ. ಈ ಸಂಬಂಧ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ ಗಾಯತ್ರಿ ಶಾಂತೇಗೌಡ ಅವರಿಗೆ ಮೇಲುಗೈ ದೊರೆತಂತಾಗಿದೆ.

ಕರ್ನಾಟಕ ಹೈಕೋರ್ಟ್​ ನೀಡಿದ್ದ ತೀರ್ಪು ಏನು?

ಈ ಪ್ರಕರಣದ ಕೇಂದ್ರಬಿಂದುವಾಗಿದ್ದದ್ದು ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರ ಮತದಾನದ ಹಕ್ಕಿನ ಪ್ರಶ್ನೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಮೊರೆಹೋಗಿದ್ದ ಪ್ರಾಣೇಶ್

ಈ ತೀರ್ಪನ್ನು ಪ್ರಶ್ನಿಸಿ ಎಂಕೆ ಪ್ರಾಣೇಶ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಇದೀಗ ಸುಪ್ರೀಂಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಇದರೊಂದಿಗೆ ಪ್ರಾಣೇಶ್ ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದಾಗಿದೆ.

ಪ್ರಕರಣದ ಹಿನ್ನೆಲೆ

2021ರ ಡಿಸೆಂಬರ್​​ನಲ್ಲಿ ಚಿಕ್ಕಮಗಳೂರಿನಿಂದ ಪರಿಷತ್​ಗೆ ನಡೆದಿದ್ದ ಚುನಾವಣೆಯಲ್ಲಿ 2410 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ 39 ಮತಗಳು ಅಸಿಂಧುವಾಗಿದ್ದವು. ಪ್ರಾಣೇಶ್ ಪರ 1,188 ಮತ ಚಲಾವಣೆಯಾಗಿದ್ದರೆ, ಗಾಯತ್ರಿ ಶಾಂತೇಗೌಡ ಪರ 1,182 ಮತ ಚಲಾವಣೆಯಾಗಿದ್ದವು. 12 ಮಂದಿ ನಾಮನಿರ್ದೇಶಿತ ಸದಸ್ಯರು ಕೂಡ ಆ ಚುನಾವಣೆಯಲ್ಲಿ ಮತಚಲಾಯಿಸಿದ್ದರು. ಈ ಮತಗಳನ್ನು ಪರಿಗಣಿಸಿರುವ ಕ್ರಮವನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ನಾಮನಿರ್ದೇಶಿತ ಸದಸ್ಯರ ಮತಗಳನ್ನು ಪ್ರತ್ಯೇಕಿಸಿ ಮರು ಮತಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚಿಸಿತ್ತು.

ನಂತರ ಈ ಆದೇಶವನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ವೇಳೆ, ಚುನಾವಣಾ ಆಯೋಗದಿಂದ ಮಾಹಿತಿ ಪಡೆದುಕೊಂಡಿದ್ದ ಸುಪ್ರೀಂ ಕೋರ್ಟ್, ಮರು ಮತಎಣಿಕೆ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ನಿರ್ದೇಶಿಸಿತ್ತು. ಇದೀಗ ಅಂತಿಮವಾಗಿ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್, ಪ್ರಾಣೇಶ್ ಅವರ ಅರ್ಜಿಯನ್ನು ವಜಾಗೊಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Thu, 16 July 26

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ