Karnataka High Court: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ತಿ ನೇಮಕಕ್ಕೆ ಶಿಫಾರಸು

Justice Ritu Raj Awasthi | ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ.

Karnataka High Court: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜ್ ಅವಸ್ತಿ ನೇಮಕಕ್ಕೆ ಶಿಫಾರಸು
ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 21, 2021 | 4:34 PM

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ (Karnataka High Court Chief Justice)  ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ( Justice Ritu Raj Awasthi ) ಅವರನ್ನು ನೇಮಕ ಮಾಡಲು ಶಿಫಾರಸು ಮಾಡಲಾಗಿದೆ. ಕರ್ನಾಟಕ ಸೇರಿದಂತೆ 8 ಹೈಕೋರ್ಟ್​ಗಳ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ ರಮಣ (CJI NV Ramana) ಅವರ ನೇತೃತ್ವದ ಕೊಲಿಜಿಯಂ ಶಿಫಾರಸು ಮಾಡಿದೆ. ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿರುವ ರಿತು ರಾಜ್‌ ಅವಸ್ತಿ ಅವರ ಹೆಸರನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು ಮಾಡಿದೆ. ಇದರೊಂದಿಗೆ ದೇಶದ 13 ಹೈಕೋರ್ಟ್‌ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಶಿಫಾರಸು ಮಾಡಲಾಗಿದೆ.

ಈ ಬಗ್ಗೆ ಸುಪ್ರೀಂ ಕೋರ್ಟ್​ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದ್ದು, ಸುಪ್ರೀಂ ಕೋರ್ಟ್ ಕೊಲಿಜಿಯಂ ಸೆಪ್ಟೆಂಬರ್ 16ರಂದು ನಡೆದ ಸಭೆಯಲ್ಲಿ 2021ರ ಸಾಲಿನಲ್ಲಿ ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಮೇಲ್ದರ್ಜೆಗೇರಲು ಶಿಫಾರಸು ಮಾಡಿದೆ. ಸಿಜೆಐ ಎನ್​ವಿ ರಮಣ, ನ್ಯಾಯಮೂರ್ತಿ ಯು.ಯು. ಲಲಿತ್, ಎ.ಎಂ. ಖಾನ್ವಿಲ್ಕರ್ ಅವರನ್ನೊಳಗೊಂಡ ಕೊಲಿಜಿಯಂ ಈ ಶಿಫಾರಸು ಮಾಡಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದವರ ಪಟ್ಟಿ ಹೀಗಿದೆ:

– ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

–  ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಅಲಹಾಬಾದ್ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

– ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

– ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ ಎಸ್‌ ಓಕಾ ಅವರನ್ನು ಸುಪ್ರೀಂಕೋರ್ಟ್‌ಗೆ ಪ್ರಮೋಷನ್ ನೀಡಿದ ಬಳಿಕ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಶಿಫಾರಸು ಮಾಡಲಾಗಿದೆ.

ವರ್ಗಾವಣೆಯಾಗಿರುವ ಮುಖ್ಯ ನ್ಯಾಯಮೂರ್ತಿಗಳ ಪಟ್ಟಿ ಹೀಗಿದೆ: 1. ನ್ಯಾಯಮೂರ್ತಿ ಅಕಿಲ್‌ ಖುರೇಶಿ – ತ್ರಿಪುರದಿಂದ ರಾಜಸ್ಥಾನಕ್ಕೆ

2. ನ್ಯಾಯಮೂರ್ತಿ ಇಂದ್ರಜಿತ್ ಮಹಂತಿ – ರಾಜಸ್ಥಾನದಿಂದ ತ್ರಿಪುರಕ್ಕೆ

3. ನ್ಯಾಯಮೂರ್ತಿ ಮೊಹಮ್ಮದ್ ರಫೀಕ್ – ಮಧ್ಯಪ್ರದೇಶದಿಂದ ಹಿಮಾಚಲ ಪ್ರದೇಶಕ್ಕೆ

4. ನ್ಯಾಯಮೂರ್ತಿ ಅರುಪ್ ಕುಮಾರ್ ಗೋಸ್ವಾಮಿ – ಆಂಧ್ರಪ್ರದೇಶದಿಂದ ಛತ್ತೀಸ್‌ಗಢಕ್ಕೆ

5. ನ್ಯಾಯಮೂರ್ತಿ ಬಿಸ್ವನಾಥ್ ಸೋಮಡ್ಡರ್ – ಮೇಘಾಲಯದಿಂದ ಸಿಕ್ಕಿಂಗೆ

ಇದನ್ನೂ ಓದಿ: 12 ಹೈಕೋರ್ಟ್​ಗಳಿಗೆ 68 ನ್ಯಾಯಮೂರ್ತಿಗಳ ನೇಮಕಕ್ಕೆ ಕಾನೂನು ಸಚಿವರಿಗೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಮನವಿ

ನನಗಾಗಿ ಸುಪ್ರೀಂಕೋರ್ಟ್​ ಬದಲಾಯ್ತು: ನ್ಯಾಯಮೂರ್ತಿ ಚಂದ್ರಚೂಡ್ ಸಹಾಯಕ ರಾಹುಲ್ ಬಜಾಜ್ ಬರಹ

(Supreme Court CJI NV Ramana Recommended Justice Ritu Raj Awasthi as Karnataka High Court Chief Justice)

Published On - 4:31 pm, Tue, 21 September 21

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ