ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ನೇಮಕಕ್ಕೆ ಸುಪ್ರೀಂಕೋರ್ಟ್​ನ ಕೊಲಿಜಿಯಂ ಶಿಫಾರಸು

ಕರ್ನಾಟಕ ಹೈಕೋರ್ಟ್​ಗೆ ನ್ಯಾಯಮೂರ್ತಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್​ನ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ. ವಕೀಲ ನಾಗೇಂದ್ರ ನಾಯಕ್ ನೇಮಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿ ನೇಮಕಕ್ಕೆ ಸುಪ್ರೀಂಕೋರ್ಟ್​ನ ಕೊಲಿಜಿಯಂ ಶಿಫಾರಸು
ಕರ್ನಾಟಕ ಹೈಕೋರ್ಟ್
Follow us
TV9 Web
| Updated By: ganapathi bhat

Updated on:Apr 06, 2022 | 7:25 PM

ಬೆಂಗಳೂರು: ಕರ್ನಾಟಕ ಹೈಕೋರ್ಟ್​ಗೆ ನ್ಯಾಯಮೂರ್ತಿ ನೇಮಕ ಮಾಡಬೇಕು ಎಂದು ಸುಪ್ರೀಂಕೋರ್ಟ್​ನ ಕೊಲಿಜಿಯಂ ಕೇಂದ್ರಕ್ಕೆ ಶಿಫಾರಸು ಮಾಡಿದೆ. ವಕೀಲ ನಾಗೇಂದ್ರ ನಾಯಕ್ ನೇಮಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದೆ. ಈ ಬಗ್ಗೆ ಹಿಂದೆಯೂ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಹಾಗಾಗಿ, ಮಾರ್ಚ್ 2ರ ಕೊಲಿಜಿಯಂ ಸಭೆಯಲ್ಲಿ ಮತ್ತೊಮ್ಮೆ ಶಿಫಾರಸು ಮಾಡಲಾಗಿದೆ.

ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಎರಡೂವರೆ ವರ್ಷಗಳ ಹಿಂದೆ ಆಡಳಿತಾಧಿಕಾರಿ ನೇಮಕ ಮಾಡಿತ್ತು. 6 ತಿಂಗಳಿಗೊಮ್ಮೆ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್ ಮುಂಬರುವ ಮೂರು ತಿಂಗಳ ಅವಧಿಯಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ ಎಂದು ಆದೇಶಿಸಿದೆ.

ಸತತವಾಗಿ ಆಡಳಿತಾಧಿಕಾರಿಯ ಅಧಿಕಾರ ವಿಸ್ತರಿಸಲಾಗದು. ಹೀಗಾಗಿ ಮೂರು ತಿಂಗಳಲ್ಲಿ ಚುನಾವಣೆ ನಡೆಸಬೇಕು ಎಂದು ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್‌ ಅವರ ಏಕಸದಸ್ಯ ಪೀಠ ಆದೇಶ ನೀಡಿದೆ. ಒಕ್ಕಲಿಗರ ಸಂಘದ ಆಡಳಿತಾಧಿಕಾರಿ ಕುರಿತು, ಒಕ್ಕಲಿಗರ ಸಂಘದ ಸದಸ್ಯ ಮತ್ತು ಚಿತ್ರ ನಿರ್ಮಾಪಕ ಕೃಷ್ಣೇಗೌಡ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿರುವ ಹೈಕೋರ್ಟ್ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆಂಗಳೂರಿನ ಪ್ರಮುಖ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್​ ಆದೇಶ ಬೆಂಗಳೂರಿನ ಕೆರೆಗಳ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೇಗೂರು ಕೆರೆ, ಸುಬ್ರಹ್ಮಣ್ಯಪುರ ಕೆರೆ, ಕಗ್ಗದಾಸಪುರ ಕೆರೆ ಒತ್ತುವರಿ ತೆರವಿಗೆ ಆದೇಶ ನೀಡಲಾಗಿದ್ದು, ಡಿಪಿಎಆರ್​ನಂತೆ ಕಾಮಗಾರಿ ನಿರ್ವಹಿಸಲು ಬಿಬಿಎಂಪಿಗೆ ಹೈಕೋರ್ಟ್ ಅನುಮತಿ ನೀಡಿದೆ. ಕೆರೆ ಸುತ್ತಲಿನ ಪಾದಚಾರಿ ಮಾರ್ಗದ ಅಗಲ ಕಡಿತಗೊಳಿಸಲು ಸೂಚಿಸುವ ಜೊತೆಗೆ ಕೆರೆಗಳ ನೀರು ಶೇಖರಣೆ ಸಾಮರ್ಥ್ಯ ಹೆಚ್ಚಳ ಮಾಡಲು ಬೇಕಾದ ಕ್ರಮಕೈಗೊಳ್ಳಲು ಸೂಚನೆ ನೀಡಿದೆ.

ಇದನ್ನೂ ಓದಿ: ಬೆಂಗಳೂರಿನ ಪ್ರಮುಖ ಕೆರೆಗಳ ಒತ್ತುವರಿ ತೆರವುಗೊಳಿಸಲು ಬಿಬಿಎಂಪಿಗೆ ಹೈಕೋರ್ಟ್​ ಆದೇಶ

ತಮ್ಮ ವಿರುದ್ಧ ಮಾಧ್ಯಮಗಳು ವರದಿ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿದ ಕರ್ನಾಟಕದ 6 ಸಚಿವರು: ಅಚ್ಚರಿ ಹುಟ್ಟಿಸಿದ ನಡೆ

Published On - 10:42 pm, Fri, 5 March 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ