ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ

ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿತ್ತು. ಮಹಿಳೆಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಸೇರಿದ್ದಾರೆ. ಪ್ರಜ್ವಲ್​ ರೇವಣ್ಣ ಅವರು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾ ಮಾಡಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ
ಪ್ರಜ್ವಲ್​ ರೇವಣ್ಣ ಜಾಮೀನು ಅರ್ಜಿ ವಜಾ
Edited By: ವಿವೇಕ ಬಿರಾದಾರ

Updated on: Nov 11, 2024 | 2:25 PM

ನವದೆಹಲಿ, ನವೆಂಬರ್​​ 11: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಸುಪ್ರೀಂಕೋರ್ಟ್ (Supreme Court)​ ಶಾಕ್​ ನೀಡಿದೆ. ​ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್​ ರೇವಣ್ಣ ಅವರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿ ಮಂಡಿಸಿದ್ದರು. ಪ್ರಜ್ವಲ್​ ರೇವಣ್ಣ ಅವರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು.

ಪ್ರಜ್ವಲ್​ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು, ಈ ವೇಳೆ ನನಗೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ, ನ್ಯಾಯಪೀಠ ಮುಕುಲ್ ರೋಹ್ಟಗಿ ವಾದ ಒಪ್ಪದೆ. ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಅರ್ಜಿ ವಜಾಗೊಳಿಸಿತು.

ಆಗ, ಮುಕುಲ್ ರೋಹ್ಟಗಿ ಅವರು 6 ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೆ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ನಾವೇನು ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌: 3 ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್​!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್​ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು. ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ತಂಡ ರಚಿಸಿತು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ಆದರೆ, ಎಸ್​ಐಟಿ ಅಧಿಕಾರಿಗಳ ತಾಂತ್ರಿಕ ನಡೆಯಿಂದ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವಲ್ಲಿ ಯಶ್ವಿಸಿಯಾಯಿತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 1,632 ಪುಟಗಳ ಚಾರ್ಚ್​​ಶೀಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ​ ಸಲ್ಲಿಸಿತ್ತು. ಚಾರ್ಚ್​ಶೀಟ್​ನಲ್ಲಿ ಮನೆ ಕೆಲಸದಾಕೆಗೆ ಲೈಂಗಿಕ್​ ದೌರ್ಜನ್ಯ ನೀಡಿರುವುದು ಉಲ್ಲೇಖವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Mon, 11 November 24

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us