ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿ ಆದೇಶ ಹೊರಡಿಸಿದೆ.

ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
Banu Mushta

Updated on: Sep 19, 2025 | 2:35 PM

ಬೆಂಗಳೂರು, ಸೆಪ್ಟೆಂಬರ್ 19: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ (mysuru dasara) ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq)​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಸ್ತಾಕ್ ವಿರುದ್ಧದ PIL ವಜಾಕ್ಕೆ ಪ್ರತಾಪ್ ಸಿಂಹ ಅಸಮಾಧಾನ
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧಿಸಿದ್ದ ಪಿಐಎಲ್ ವಜಾ
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ: ಮತ್ತೆರಡು ಪಿಐಎಲ್‌

ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ.  ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್​ನಲ್ಲೂ ವಜಾ

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟಿನಲ್ಲಾದರೂ ನ್ಯಾಯ ಸಿಗಬಹುದು ಎಂಬ ಭರವಸೆ ಇತ್ತು. ಆದರೆ ಅದು ಕೂಡ ಇಲ್ಲವಾಯಿತು ಎಂದು ತೀರ್ಪಿನ ನಂತರ ಪ್ರತಾಪ್ ಸಿಂಹ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಸೆಕ್ಯುಲರಿಸಂ ಹೆಸರಿನಲ್ಲಿ ನಮ್ಮ ವಾದಕ್ಕೆ ಮನ್ನಣೆ ಕೊಟ್ಟಿಲ್ಲ: ಬಾನು ಮುಸ್ತಾಕ್ ವಿರುದ್ಧದ PIL ವಜಾಕ್ಕೆ ಸಿಂಹ ಅಸಮಾಧಾನ

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಅನೇಕ ನಾಯಕರು ಟೀಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:32 pm, Fri, 19 September 25