AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ

Mekedatu project: ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರೈತರ ಹಿತಾಸಕ್ತಿ ಹಾಗೂ ಕಾವೇರಿ ನೀರಿನ ಹಕ್ಕು ರಕ್ಷಿಸಲು ಕಾನೂನು ಹೋರಾಟ ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದ್ರೆ, ಮತ್ತೊಂದೆಡೆ ಸುಪ್ರೀಂಕೋರ್ಟ್​​​ನಲ್ಲಿ ತಮಿಳುನಾಡು ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಇದರೊಂದಿಗೆ ಇದು CM ವಿಜಯ್‌ ಗೆ ಮೊದಲ ಶಾಕ್.

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ
Mekedatu Project
ಹರೀಶ್ ಜಿ.ಆರ್​.
| Edited By: |

Updated on: May 25, 2026 | 11:20 PM

Share

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ.

ಮುಖ್ಯಾಂಶಗಳು

  • ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ವಿಚಾರ
  • ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಸರ್ಕಾರಕ್ಕೆ ಮತ್ತೆ ಹಿನ್ನಡೆ
  • ತಮಿಳುನಾಡು ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’
  • ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
  • ಮೇಕೆದಾಟು ಯೋಜನೆ ಬಗ್ಗೆ 2025ರ ನವೆಂಬರ್​ನಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್​

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025 ನವೆಂಬರ್​​ ನಲ್ಲಿ ವಜಾಗೊಳಿಸಿತ್ತು. ಆದ್ರೆ, ಇದೀಗ ಈ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಾಯ್ ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ. ಮರು ಪರಿಶೀಲನಾ ಅರ್ಜಿಯ ವಿಷಯಗಳು ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ತೀರ್ಪಿನ ಪುನರ್ ಪರಿಶೀಲನೆ ಅಗತ್ಯ ಇಲ್ಲ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ

2025ರಲ್ಲೇ ಮಧ್ಯಪ್ರವೇಶ ಮಾಡಲ್ಲ ಎಂದಿದ್ದ ಸುಪ್ರೀಂ

ಮೇಕೆದಾಟು ಯೋಜನೆಯ ಪ್ರಸ್ತಾವನೆಯು ಇನ್ನೂ ತಜ್ಞ ಸಂಸ್ಥೆಗಳ ಪರಿಶೀಲನಾ ಹಂತದಲ್ಲಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸೇರಿದಂತೆ ಹಲವಾರು ಸಮಿತಿಗಳು ಇದರ ಬಗ್ಗೆ ಚರ್ಚೆ ನಡೆಸುತ್ತಿವೆ. ಹೀಗಾಗಿ, ಈ ಹಂತದಲ್ಲಿ ನ್ಯಾಯಾಲಯವು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು 2025ರಲ್ಲೇ ಸುಪ್ರೀಂಕೋರ್ಟ್ ಹೇಳಿತ್ತು.

ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಿದ್ದ ವಿಜಯ್

ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಗಾಗಿ ಶೀಘ್ರದಲ್ಲೇ ‘ಭೂಮಿ ಪೂಜೆ’ ನೆರವೇರಿಸಲು ಸಿದ್ಧತೆ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಈ ತುರ್ತು ಸಭೆ ಕರೆದಿದ್ದು, ಕರ್ನಾಟಕವು ಮೇಕೆದಾಟು ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ಮತ್ತು ತಮಿಳುನಾಡಿನ ಕಾವೇರಿ ನೀರಿನ ಹಕ್ಕನ್ನು ರಕ್ಷಿಸಲು ಕಾನೂನು ಹೋರಾಟವನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು ಎನ್ನಲಾಗಿದೆ. ಇದರ ಮಧ್ಯೆ ಇದೀಗ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಬಾಲ್ಕನಿ ತಡೆಗೋಡೆ ಕುಸಿದು ರಸ್ತೆಗೆ ಬಿದ್ದ ವಿದ್ಯಾರ್ಥಿಗಳು
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪಾಕ್ ಪ್ರಧಾನಿಯ ಸುಳ್ಳು ಹೇಳಿಕೆಗೆ ನಕ್ಕು ತಲೆಯಾಡಿಸಿದ ಭಾರತೀಯ ರಾಜತಾಂತ್ರಿಕ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಪ್ರಣಾಳಿಕೆ ಫೈಟ್: BR ಪಾಟೀಲ್​​ ಬೆನ್ನಲ್ಲೇ ಸಿಎಂಗೆ ಬಿಕೆ ಹರಿಪ್ರಸಾದ್ ಪತ್ರ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಕಳ್ಳಾಟ ಆಡಿ ಸಿಕ್ಕಿಬಿದ್ದ ಕಿರಣ್​​ಗೆ ಕಿಚ್ಚನ ಕ್ಲಾಸ್: ವಿಡಿಯೋ ನೋಡಿ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಬಂಗಾಳದಲ್ಲಿ ಟಿಎಂಸಿ ಶಾಸಕ ಕುನಾಲ್ ಘೋಷ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಮೆಚ್ಚಿನ ಶಿಕ್ಷಕನಿಗೆ ಮಕ್ಕಳ ಕಣ್ಣೀರಿನ ವಿದಾಯ
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ಪಿತೃಪಕ್ಷದ ಮಹತ್ವವೇನು? ಈ 15 ದಿನಗಳಲ್ಲಿ ಪಿತೃಕಾರ್ಯ ಏಕೆ ಮಾಡಬೇಕು?
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ವಿಷ್ಣುವರ್ಧನ್ ಅಮೃತ ಮಹೋತ್ಸವ; ಕಾರ್ಯಕ್ರಮದ ವಿವರ ಹೀಗಿದೆ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ
ರಾಜೀನಾಮೆ ಬಗ್ಗೆ ಕೇಳಿಬರ್ತಿರೋ ಟೀಕೆಗಳಿಗೆ ಯಶವಂತರಾಯ ಗೌಡ ಏನಂದ್ರು ನೋಡಿ