AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್

ಕರ್ನಾಟಕದ ಮುಖ್ಯಮಂತ್ರಿಯಾಗಲು ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಿದೆ,

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:May 17, 2023 | 1:36 PM

Share

ನವದೆಹಲಿ/ಬೆಂಗಳೂರು: ಡಿಕೆ ಶಿವಕುಮಾರ್ (KPCC President DK Shivakumar)ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ(CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court) ವಿಚಾರಣೆ ನಡೆಸಿತು. ಆದ್ರೆ, ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಸಿಬಿಐ ತಿಳಿಸಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಬಳಿಕ ಮೇ ಅಂತ್ಯದವರೆಗೂ ಅದನ್ನು ವಿಸ್ತರಿಸಿತ್ತು.

ಡಿಕೆ ಶಿವಕುಮಾರ್‌ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. ಈ ವೇಳೆ ಕಂಪ್ಯೂಟರ್ ಹಾರ್ಡ್​ಡಿಸ್ಕ್​ ಹಾಗೂ 57 ಲಕ್ಷ ರೂ. ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

Published On - 1:22 pm, Wed, 17 May 23