AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟು ಬಿಡದ ಸಿಬಿಐ: ಡಿಸಿಎಂ ಡಿಕೆ ಶಿವಕುಮಾರ್​‌ಗೆ ಸುಪ್ರೀಂಕೋರ್ಟ್ ನೋಟಿಸ್

ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್, ಉಪಮುಖ್ಯಮಂತ್ರಿ​ ಡಿಕೆ ಶಿವಕುಮಾರ್​ ಅವರಿಗೆ ನೋಟಿಸಿ ಜಾರಿ ಮಾಡಿದೆ.

ಪಟ್ಟು ಬಿಡದ ಸಿಬಿಐ: ಡಿಸಿಎಂ ಡಿಕೆ ಶಿವಕುಮಾರ್​‌ಗೆ ಸುಪ್ರೀಂಕೋರ್ಟ್ ನೋಟಿಸ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 16, 2023 | 2:42 PM

Share

ನವದೆಹಲಿ, (ಅಕ್ಟೋಬರ್ 16): ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್(Supreme Court) ​ ಡಿಕೆ ಶಿವಕುಮಾರ್​ಗೆ (DK Shivakumar) ನೋಟಿಸಿ ಜಾರಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ತರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್​ ಮಧ್ಯಂತರ ತಡೆ ನೀಡಿತ್ತು. ಇದನ್ನು ತೆರವು ಕೋರಿ ಸಿಬಿಐ ಸುಪ್ರೀಂಕೋರ್ಟ್​ಗೆ  ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು(ಅಕ್ಟೋಬರ್  16) ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.

ಡಿಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್‌ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಹೈಕೋರ್ಟ್​ನ ಮಧ್ಯಂತರ ತಡೆ ತೆರವು ಕೋರಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್​ಗೆ ನೋಟಿಸ್ ನೀಡಿದೆ.

ಇದನ್ನೂ ಓದಿ: DK Shivakumar Case: ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್​, ಸಿಬಿಐಗೆ ಮತ್ತೆ ನಿರಾಸೆ

ಹೈಕೋರ್ಟ್‌ ಡಿಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಅದನ್ನು ಅನೇಕ ಬಾರಿ ವಿಸ್ತರಿಸಿತ್ತು. ಈ ಹಿನ್ನೆಲೆ ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು.

ಏನಿದು ಪ್ರಕರಣ

ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ  13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಇದೀಗ ಹೈಕೋರ್ಟ್​ನ ಆದೇಶವನ್ನು ತೆರವು ಕೋರಿ ಸುಪ್ರೀಂಕೋರ್ಟ್​ ಮೊರೆ ಹೋಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:10 pm, Mon, 16 October 23

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ