ನವದೆಹಲಿ, (ಅಕ್ಟೋಬರ್ 16): ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ (Karnataka High Court) ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್(Supreme Court) ಡಿಕೆ ಶಿವಕುಮಾರ್ಗೆ (DK Shivakumar) ನೋಟಿಸಿ ಜಾರಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ತರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಇದನ್ನು ತೆರವು ಕೋರಿ ಸಿಬಿಐ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು(ಅಕ್ಟೋಬರ್ 16) ಸಿಬಿಐನ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ್ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ, ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ.
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಬಳಿಕ ಸಿಬಿಐ ಹೈಕೋರ್ಟ್ನ ಮಧ್ಯಂತರ ತಡೆ ತೆರವು ಕೋರಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಈ ಬಗ್ಗೆ ಅಭಿಪ್ರಾಯ ಕೇಳಿ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿದೆ.
ಹೈಕೋರ್ಟ್ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಳಿಕ ಅದನ್ನು ಅನೇಕ ಬಾರಿ ವಿಸ್ತರಿಸಿತ್ತು. ಈ ಹಿನ್ನೆಲೆ ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿತ್ತು.
ಡಿಕೆ ಶಿವಕುಮಾರ್ ಅವರು 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಮೇಲಿಂದ ಮೇಲೆ ತಡೆಯಾಜ್ಞೆಯನ್ನು ಕೋರ್ಟ್ ವಿಸ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಇದೀಗ ಹೈಕೋರ್ಟ್ನ ಆದೇಶವನ್ನು ತೆರವು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:10 pm, Mon, 16 October 23