ರಾಮಚಂದ್ರಾಪುರ ಮಠದಿಂದ ಕೈ ಜಾರಿದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ; ದೇಗುಲವನ್ನು ಮುಜರಾಯಿ ಇಲಾಖೆಗೆ ಹಿಂದಿರುಗಿಸಲು ಸುಪ್ರೀಂ ಆದೇಶ

ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠ ಹಾಗೂ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದ ಬಹುಮಹತ್ವದ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ರಾಮಚಂದ್ರಾಪುರ ಮಠದ ಸುಪರ್ದಿಯಲ್ಲಿದ್ದ ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನುರಾಮಚಂದ್ರಾಪುರ ಮಠವು ಮುಜರಾಯಿ ಇಲಾಖೆಗೆ ವಹಿಸಬೇಕೆಂಬ ಅತಿ ಮಹತ್ವದ ತೀರ್ಪನ್ನು ನೀಡಿದೆ. ಯಾಕೆಂದರೆ, ಈ ಹಿಂದೆ, ಈ ತೀರ್ಪು ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಪು ಆಗಿದ್ದರಿಂದ ರಾಮಚಂದ್ರಾಪುರ ಮಠಕ್ಕೆ ಹಿನ್ನಡೆ ಆಗಿದೆ. ಯಾವ ಬಿ.ಎಸ್​. ಯಡಿಯೂರಪ್ಪ ಸರಕಾರ ಈ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ […]

ರಾಮಚಂದ್ರಾಪುರ ಮಠದಿಂದ ಕೈ ಜಾರಿದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ; ದೇಗುಲವನ್ನು ಮುಜರಾಯಿ ಇಲಾಖೆಗೆ ಹಿಂದಿರುಗಿಸಲು ಸುಪ್ರೀಂ ಆದೇಶ
ಗೋಕರ್ಣ ಮಹಾಬಲೇಶ್ವರ ದೇವಸ್ಥಾನ
Follow us
Skanda
|

Updated on:Apr 20, 2021 | 8:43 AM

ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ ಮಠ ಹಾಗೂ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ನಡುವಿನ ತಿಕ್ಕಾಟಕ್ಕೆ ಸಂಬಂಧಿಸಿದ ಬಹುಮಹತ್ವದ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ರಾಮಚಂದ್ರಾಪುರ ಮಠದ ಸುಪರ್ದಿಯಲ್ಲಿದ್ದ ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನುರಾಮಚಂದ್ರಾಪುರ ಮಠವು ಮುಜರಾಯಿ ಇಲಾಖೆಗೆ ವಹಿಸಬೇಕೆಂಬ ಅತಿ ಮಹತ್ವದ ತೀರ್ಪನ್ನು ನೀಡಿದೆ. ಯಾಕೆಂದರೆ, ಈ ಹಿಂದೆ, ಈ ತೀರ್ಪು ಸರ್ವೋಚ್ಛ ನ್ಯಾಯಾಲಯದ ಅಂತಿಮ ತೀರ್ಪು ಆಗಿದ್ದರಿಂದ ರಾಮಚಂದ್ರಾಪುರ ಮಠಕ್ಕೆ ಹಿನ್ನಡೆ ಆಗಿದೆ. ಯಾವ ಬಿ.ಎಸ್​. ಯಡಿಯೂರಪ್ಪ ಸರಕಾರ ಈ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ವಹಿಸಿತ್ತೋ, ಮತ್ತೆ ಅದೇ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಈ ದೇವಸ್ಥಾನ ಮುಜರಾಯಿ ಇಲಾಖೆಯ ಸುಪರ್ದಿಗೆ ಬರುವಂತಾಗಿದ್ದು ವಿಶೇಷ.

ವಿವಾದ ಏನು?

ಪೌರಾಣಿಕ ಹಿನ್ನೆಲೆಯುಳ್ಳ ಗೋಕರ್ಣ ದೇವಸ್ಥಾನವು ಕರ್ನಾಟಕದಲ್ಲಿ ಅತ್ಯಂತ ಪ್ರಸಿದ್ಧ ಶಿವನ ದೇವಸ್ಥಾನವಾಗಿದ್ದು ವಿವಿಧೆಡೆಯಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಶಿವರಾತ್ರಿ ಸಂದರ್ಭದಲ್ಲಿ ಜನಸಾಗರವೇ ಹರಿದುಬರುವುದರಿಂದ ಆದಾಯದ ದೃಷ್ಟಿಯಿಂದಲೂ ಇದು ಬಲಾಢ್ಯವಾಗಿದೆ. ವಾರಣಾಸಿ ಅಥವಾ ಕಾಶಿಗೆ ಹೋಗಲಾರದವರು ಗೋಕರ್ಣದಲ್ಲಿ ಅಪರ ಕಾರ್ಯಗಳನ್ನು ಮಾಡಿಸಿದರೆ ಮೃತರ ಆತ್ಮಕ್ಕೆ ಮುಕ್ತಿ ದೊರಕುತ್ತದೆ ಎಂಬ ನಂಬಿಕೆಯೂ ಜನರ ಮನಸ್ಸಿನಲ್ಲಿ ನೆಲೆಯೂರಿರುವುದರಿಂದ ಈ ದೇಗುಲಕ್ಕೆ ಎಲ್ಲಾ ಕಾಲದಲ್ಲಿಯೂ ಆಗಮಿಸುವವರು ಇದ್ದೇ ಇರುತ್ತಾರೆ. ಹೀಗಾಗಿ ಮುಜರಾಯಿ ಇಲಾಖೆಗೆ ಸೇರಿದ್ದ ಈ ದೇವಸ್ಥಾನ ಎಲ್ಲಾ ರೀತಿಯಿಂದಲೂ ಸರ್ಕಾರಕ್ಕೆ ನೆರವಾಗುವಂತೆಯೇ ಇತ್ತು.

2008ರ ಆಗಸ್ಟ್‌ನಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ಹೊಸನಗರ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಬಾಲಚಂದ್ರ ವಿಘ್ನೇಶ್ವರ ದೀಕ್ಷಿತ್ ಹಾಗೂ ಇತರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಗೋಕರ್ಣ ದೇವಾಲಯದ ಹಸ್ತಾಂತರವನ್ನು ವಿರೋಧಿಸಿ, ಈ ದೇಗುಲವು ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಒಳಪಡುವುದರಿಂದ ಇದನ್ನು ಖಾಸಗಿಯವರಿಗೆ ಹಸ್ತಾಂತರಿಸಿರುವುದು ಸರಿಯಲ್ಲ ಎಂಬ ವಾದವನ್ನು ಮುಂದಿಟ್ಟಿದ್ದರು. ತದನಂತರ ಹೈಕೋರ್ಟ್ ಆದೇಶದ ಮೇರೆಗೆ ದೇವಾಲಯ ಸರ್ಕಾರಕ್ಕೆ ಹಸ್ತಾಂತರವಾಗಿತ್ತು. ಅದಾಗುತ್ತಿದ್ದಂತೆಯೇ ಹೈಕೋರ್ಟ್ ಆದೇಶ ಪ್ರಶ್ನಿಸಿದ ರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್‌ ಮೊರೆ ಹೋಗಿತ್ತು. ಬಳಿಕ ಪ್ರಕರಣ ಆಲಿಸಿದ ಸುಪ್ರೀಂಕೋರ್ಟ್ ಹೈಕೋರ್ಟ್​ ಆದೇಶವನ್ನು ತಳ್ಳಿಹಾಕಿ ಸದ್ಯಕ್ಕೆ ದೇವಸ್ಥಾನವು ರಾಮಚಂದ್ರಾಪುರ ಮಠದ ಬಳಿಯೇ ಇರಲಿ ಎಂದು ಮಧ್ಯಂತರ ತೀರ್ಪು ನೀಡಿತ್ತು. ಇಷ್ಟೆಲ್ಲಾ ಆದ ನಂತರ ಸರ್ಕಾರ ಮಹಾಬಲೇಶ್ವರ ದೇವಸ್ಥಾನವನ್ನು ಮತ್ತೆ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು.

ಈ ನಡುವೆ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬಾಲಚಂದರ್ ದೀಕ್ಷಿತ್ ಮತ್ತು ನರಹರಿ ಕೃಷ್ಣ ಹೆಗ್ಡೆ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ಪರಿಣಾಮವಾಗಿ ಕಳೆದ 10 ವರ್ಷಗಳಿಂದ ಗೋಕರ್ಣ ದೇಗುಲದ ಆಡಳಿತ ನಡೆಸುತ್ತಿದ್ದ ರಾಮಚಂದ್ರಾಪುರ ಮಠಕ್ಕೆ ಹೈಕೋರ್ಟ್ ತಡೆ ನೀಡಿ, ಸೆಪ್ಟೆಂಬರ್ 10ರಿಂದ ಉಸ್ತುವಾರಿ ಸಮಿತಿ ಅಸ್ಥಿತ್ವಕ್ಕೆ ಬರಬೇಕು ಎಂದು ಆದೇಶ ಹೊರಡಿಸಿತ್ತು. ಸದ್ಯ ಈ ವಿವಾದಿತ ಪ್ರಕರಣಕ್ಕೆ ಅಂತಿಮ ತೀರ್ಪು ಸಿಕ್ಕಿದ್ದು ಮಹಾಬಲೇಶ್ವರ ದೇವಸ್ಥಾನವನ್ನು ಸರ್ಕಾರಕ್ಕೆ ಹಿಂದಿರುಗಿಸುವಂತೆ ಸರ್ವೋಚ್ಛ ನ್ಯಾಯಾಲಯ ಸೂಚಿಸಿದೆ. ಆ ಮೂಲಕ ಗೋಕರ್ಣ ದೇವಸ್ಥಾನದ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಹಸ್ತಕ್ಷೇಪ ಮಾಡಿದ್ದ ರಾಮಚಂದ್ರಾಪುರ ಮಠಕ್ಕೆ ಭಾರೀ ಮುಖಭಂಗವಾಗಿದೆ.

2008ರಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಮುಜರಾಯಿ ಇಲಾಖೆ ಸಚಿವರಾಗಿದ್ದ ಕೃಷ್ಣಯ್ಯ ಶೆಟ್ಟಿ ಗೋಕರ್ಣ ದೇಗುಲವನ್ನು ಖಾಸಗಿಯವರಿಗೆ ಹಸ್ತಾಂತರಿಸುವುದನ್ನು ಸಮರ್ಥಿಸಿಕೊಂಡಿದ್ದರು. ಕಳೆದ ಕೆಲ ವರ್ಷಗಳಿಂದ ದೇವಸ್ಥಾನವನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ. ಅಲ್ಲದೇ, ದೇವಾಲಯವು ಯಾವುದೇ ಅಭಿವೃದ್ಧಿಯನ್ನೂ ಕಂಡಿಲ್ಲ. ಹೀಗಾಗಿ ಇದನ್ನು ಸಮರ್ಥವಾಗಿ ನಿಭಾಯಿಸಲು ರಾಮಚಂದ್ರಾಪುರ ಮಠದವರು ಮುಂದೆ ಬಂದಿದ್ದಾರೆ. ಅವರು ಮಠದ ನಿರ್ವಹಣೆ ಮಾಡುವುದಕ್ಕೆ ನಮ್ಮ ಒಪ್ಪಿಗೆ ಇದೆ ಎಂದು ಹೇಳಿಕೆ ನೀಡಿದ್ದರು. ಹೀಗೆ ದೊಡ್ಡ ದೊಡ್ಡ ಸಂಸ್ಥೆಗಳು ಕೆಲಸವನ್ನು ಹೊರ ಗುತ್ತಿಗೆ ನೀಡಿ ನಡೆಸುವಂತೆ ದೇವಾಲಯವನ್ನು ಖಾಸಗಿಯವರಿಗೆ ವಹಿಸಿಕೊಟ್ಟ ಬಿಜೆಪಿ ಸರ್ಕಾರದ ವಿರುದ್ಧ ಅಂದು ಭಾರೀ ಟೀಕೆ ವ್ಯಕ್ತವಾಗಿತ್ತು.

ಇನ್ನು ಮುಂದೆ ಆಡಳಿತ ಯಾರದ್ದು?

ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ಅವರ ನೇತೃತ್ವದ ತ್ರಿ ಸದಸ್ಯ ಪೀಠ  ಉತ್ತರ ಕನ್ನಡದ ಗೋಕರ್ಣ ದೇವಾಲಯ ಆಡಳಿತ ನಿರ್ವಹಣೆಗೆ ಸಮಿತಿ ರಚಿಸಿದೆ. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಜಸ್ಟೀಸ್ ಬಿ.ಎನ್. ಶ್ರೀಕೃಷ್ಣ ನೇತೃತ್ವದಲ್ಲಿ ಈ ಸಮಿತಿ ದೇವಸ್ಥಾನದ ಆಡಳಿತವನ್ನು ನೋಡಿಕೊಳ್ಳಲಿದೆ. ಮುಂದಿನ 15 ದಿನದಲ್ಲಿ ರಾಮಚಂದ್ರಾಪುರ ಮಠದಿಂದ ದೇವಾಲಯದ ಆಡಳಿತ ವಹಿಸಿಕೊಳ್ಳುವ ಈ ಸಮಿತಿಗೆ ಡಿಸಿ, ಎಸ್.ಪಿ., ಕುಮಟಾ ಎಸಿ, ಇಬ್ಬರು ವಿದ್ವಾಂಸರು ಸದಸ್ಯರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ ತನ್ನ ತೀರ್ಪಿನಲ್ಲಿ ತಿಳಿಸಿದೆ‌.

Published On - 2:05 pm, Mon, 19 April 21