ಕಾರ್ಖಾನೆ ಜಟಾಪಟಿ: ಸುಪ್ರೀಂಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ಗೆ ಗೆಲುವು
ಇತ್ತ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದರೆ, ಅತ್ತ ಸುಪ್ರೀಂಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ಗೆ ಗೆಲುವುವಾಗಿದೆ. ಹೌದು....ಸಕ್ಕರೆ ಕಾರ್ಖಾನೆ ಸಂಬಂಧ ಸರ್ಕಾರ ಹಾಗೂ ಯತ್ನಾಳ್ ನಡುವಿನ ಹಗ್ಗಾಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ಸರ್ಕಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಯತ್ನಾಳ್ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರಕ್ಕೆ ಮುಖಂಭಗವಾಗಿದೆ.
ನವದೆಹಲಿ, (ಡಿಸೆಂಬರ್ 20): ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಕ್ಕೆ ಏಳು ದಿನಗಳಲ್ಲಿ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದ್ದು, ಕಾನೂನು ಸಮರದಲ್ಲಿ ಯತ್ನಾಳ್ಗೆ ಗೆಲುವಾಗಿದೆ. ಇನ್ನು ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.
ಕೆಲ ಕಾರಣಗಳನ್ನು ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್ಪಿಸಿಬಿ) ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಯತ್ನಾಳ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಹೈಕೋರ್ಟ್ ಕಾರ್ಖಾನೆ ತೆರೆಯಲು ಅನುಮತಿ ಆದೇಶಿಸಿತ್ತು. ಆದ್ರೆ, ಕೆಎಸ್ಪಿಸಿಬಿ, ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್ ಸಹ ಹೈಕೋರ್ಟ್ನ ಆದೇಶವನ್ನು ಎತ್ತಿಹಿಡಿದೆ.
ರೈತರಿಗೆ ಸಿಕ್ಕ ಗೆಲುವು ಎಂದ ಯತ್ನಾಳ್
ಇನ್ನು ಸುಪ್ರೀಂಕೋರ್ಟ್ ಆದೇಶ ಹೊರಬರುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಯತ್ನಾಳ್, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ಧಿಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯುವ ಪ್ರಕ್ರಿಯೆಸಲು ಸೂಕ್ತ ಆದೇಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬರೆದುಕೊಂಡಿದ್ದಾರೆ.
The Hon’ble Supreme Court has ordered the State Government of Karnataka to provide concurrence/permission to resume crushing of sugarcane 🎋🎋 in our Siddasiri Ethanol & Power in the next 7 days.
I received this news while offering my prayers to the samadhi of Kranti Veera…
— Basanagouda R Patil (Yatnal) (@BasanagoudaBJP) December 20, 2024
ಈ ಆದೇಶವು ಕಬ್ಬು ಬೆಳಗಾರರಿಗೆ ಸಿಕ್ಕ ಜಯವಾಗಿದೆ. ಕಾರ್ಖಾನೆ ಮುಚ್ಚಿಸಲು ಯತ್ನಿಸಿದ್ದವರ ಆಟ ನಡೆಯಲಿಲ್ಲ. ಈ ಐತಿಹಾಸಿಕ ತೀರ್ಪು ರೈತ ಮತ್ತು ಕಾರ್ಮಿಕ ಸಮುದಾಯ ಹಾಗೂ ರಾಜ್ಯದ ಅತ್ಯಂತ ಹಿಂದುಳಿದ ಭಾಗವಾದ ಚಿಂಚೋಳಿ ಭಾಗದ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ ಎಂದಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:47 pm, Fri, 20 December 24