ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್, ಸಮನ್ಸ್ ನೀಡದಂತೆ ಇಡಿಗೆ ಸುಪ್ರೀಂ ಸೂಚನೆ

ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್ ದೊರೆತಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿಕೆಶಿ ಆಪ್ತರಿಗೆ ಸಮನ್ಸ್ ನೀಡಿದ್ದರು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಆಪ್ತರಾದ ಆಂಜನೇಯ, ಸುನಿಲ್ ಕುಮಾರ್ ಶರ್ಮಾ, ರಾಜೇಂದ್ರ, ಸಚಿನ್ ನಾರಾಯಣ್ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ಇದೀಗ ಸುಪ್ರೀಂಕೋರ್ಟ್ ಇಡಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಈ ನಾಲ್ವರಿಗೆ ಸಮನ್ಸ್ ನೀಡದಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಆಂಜನೇಯ, […]

ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್, ಸಮನ್ಸ್ ನೀಡದಂತೆ ಇಡಿಗೆ ಸುಪ್ರೀಂ ಸೂಚನೆ
ಸಾಧು ಶ್ರೀನಾಥ್​

Updated on: Oct 15, 2019 | 3:20 PM

ಕಾಂಗ್ರೆಸ್​ನ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ಡಿಕೆಶಿ ಆಪ್ತರಿಗೆ ಬಿಗ್ ರಿಲೀಫ್ ದೊರೆತಿದೆ.

ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಡಿಕೆಶಿ ಆಪ್ತರಿಗೆ ಸಮನ್ಸ್ ನೀಡಿದ್ದರು. ಇಡಿ ನೋಟಿಸ್ ಪ್ರಶ್ನಿಸಿ ಡಿಕೆಶಿ ಆಪ್ತರಾದ ಆಂಜನೇಯ, ಸುನಿಲ್ ಕುಮಾರ್ ಶರ್ಮಾ, ರಾಜೇಂದ್ರ, ಸಚಿನ್ ನಾರಾಯಣ್ ಸುಪ್ರೀಂಕೋರ್ಟ್ ಮೊರೆಹೋಗಿದ್ದರು. ಇದೀಗ ಸುಪ್ರೀಂಕೋರ್ಟ್ ಇಡಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಈ ನಾಲ್ವರಿಗೆ ಸಮನ್ಸ್ ನೀಡದಂತೆ ಸೂಚಿಸಿದೆ.

ಸುಪ್ರೀಂ ಕೋರ್ಟ್​ನಲ್ಲಿ ಆಂಜನೇಯ, ರಾಜೇಂದ್ರ ಪ್ರಕರಣದಲ್ಲಷ್ಟೆ ಮಧ್ಯಂತರ ಆದೇಶವಾಗಿದೆ. ಮತ್ತಿಬ್ಬರು ಆರೋಪಿಗಳ ಮಧ್ಯಂತರ ರಕ್ಷಣೆ ವಿಸ್ತರಿಸಿ ಎಂದು ಹೈಕೋರ್ಟ್​ ಮೊರೆ ಹೋಗಿದ್ದರು. ಹೀಗಾಗಿ ಒಂದು ವಾರ ಸಚಿನ್ ನಾರಾಯಣ್, ಸುನಿಲ್‌ ಶರ್ಮಾರನ್ನು ಬಂಧಿಸದಂತೆ ಮಧ್ಯಂತರ ರಕ್ಷಣೆಯನ್ನು ಹೈಕೋರ್ಟ್ ಮುಂದುವರಿಸಿದೆ.

ಐಟಿ ದಾಳಿ ವೇಳೆ ದೆಹಲಿಯ ಡಿಕೆ ಶಿವಕುಮಾರ್ ಮತ್ತು ಆಪ್ತರ ಮನೆಗಳಲ್ಲಿ ದಾಖಲೆಯಿಲ್ಲದ ಹಣ ಪತ್ತೆಯಾಗಿತ್ತು. ಹಣದ ಮೂಲ ನೀಡುವಂತೆ ಇಡಿ ದೂರು ದಾಖಲಿಸಿಕೊಂಡು ಸಮನ್ಸ್ ನೀಡಿತ್ತು. ಈ ಸಂಬಂಧ ಈಗಾಗಲೇ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿದ್ದಾರೆ.

Published On - 3:04 pm, Tue, 15 October 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us