ಕರ್ನಾಟಕದ ಮೂವರು ಸೇರಿ 9 ಜನರನ್ನು ಹೈಕೋರ್ಟ್​ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರೀಂ ಕೋರ್ಟ್​ ಶಿಫಾರಸು

| Updated By: ಸುಷ್ಮಾ ಚಕ್ರೆ

Updated on: Jan 11, 2023 | 11:54 AM

ವಕೀಲರಾದ ನಾಗೇಂದ್ರ ರಾಮಚಂದ್ರ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ತನ್ನ ಹಿಂದಿನ ಶಿಫಾರಸನ್ನು ಪುನರುಚ್ಚರಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ನಿರ್ಧರಿಸಿದೆ.

ಕರ್ನಾಟಕದ ಮೂವರು ಸೇರಿ 9 ಜನರನ್ನು ಹೈಕೋರ್ಟ್​ ನ್ಯಾಯಮೂರ್ತಿಗಳಾಗಿ ನೇಮಿಸಲು ಸುಪ್ರೀಂ ಕೋರ್ಟ್​ ಶಿಫಾರಸು
ಸುಪ್ರೀಂಕೋರ್ಟ್
Follow us on

ನವದೆಹಲಿ: ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (CJI DY Chandrachud) ನೇತೃತ್ವದ ಸುಪ್ರೀಂ ಕೋರ್ಟ್ (Supreme Court) ಕೊಲಿಜಿಯಂ ಕರ್ನಾಟಕದ 7 ನ್ಯಾಯಾಂಗ ಅಧಿಕಾರಿಗಳು ಮತ್ತು ಇಬ್ಬರು ವಕೀಲರಿಗೆ ವಿವಿಧ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಶಿಫಾರಸು ಮಾಡಿದೆ. ಕರ್ನಾಟಕದ ನ್ಯಾಯಾಂಗ ಅಧಿಕಾರಿಗಳಾದ ರಾಮಚಂದ್ರ ದತ್ತಾತ್ರೇ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್​ ನ್ಯಾಯಮೂರ್ತಿಗಳನ್ನಾಗಿ ಮಾಡುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ತನ್ನ ಸಭೆಯಲ್ಲಿ ಅನುಮೋದನೆ ನೀಡಿದೆ.

ಜನವರಿ 10ರಂದು ನಡೆದ ತನ್ನ ಸಭೆಯಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಮರುಪರಿಶೀಲನೆಯ ಮೇಲೆ ವಕೀಲರಾದ ನಾಗೇಂದ್ರ ರಾಮಚಂದ್ರ ನಾಯ್ಕ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ತನ್ನ ಹಿಂದಿನ ಶಿಫಾರಸನ್ನು ಪುನರುಚ್ಚರಿಸಲು ನಿರ್ಧರಿಸಿದೆ.

ಇದನ್ನೂ ಓದಿ: Demonetisation Verdict: ನೋಟು ಅಮಾನ್ಯೀಕರಣದ ಬಗ್ಗೆ ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ಮತ್ತೊಂದು ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿ ವಕೀಲೆ ನೀಲಾ ಕೇದಾರ್ ಗೋಖಲೆ ಅವರನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪವನ್ನು ಅನುಮೋದಿಸಿದೆ. ಗುವಾಹಟಿ ಹೈಕೋರ್ಟ್‌ನಲ್ಲಿ ನ್ಯಾಯಾಂಗ ಅಧಿಕಾರಿ ಮೃದುಲ್ ಕುಮಾರ್ ಕಲಿತಾ ಅವರನ್ನು ನ್ಯಾಯಾಧೀಶರಾಗಿ ಉನ್ನತೀಕರಿಸಲು ಸುಪ್ರೀಂ ಕೋರ್ಟ್​ ಶಿಫಾರಸು ಮಾಡಿದೆ.

ಆಂಧ್ರಪ್ರದೇಶಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ಅಧಿಕಾರಿಗಳಾದ ಪಿ. ವೆಂಕಟ ಜ್ಯೋತಿರ್ಮಾಯಿ ಮತ್ತು ವಿ. ಗೋಪಾಲಕೃಷ್ಣ ರಾವ್ ಅವರನ್ನು ಅಲ್ಲಿನ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ನೀಡಲು ಕೊಲಿಜಿಯಂ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಸಚಿವರ ಹೇಳಿಕೆಗೆ ಇಡೀ ಸರ್ಕಾರವನ್ನು ಹೊಣೆ ಮಾಡಲಾಗದು; ಸುಪ್ರೀಂ ಕೋರ್ಟ್​

ನ್ಯಾಯಾಂಗ ಅಧಿಕಾರಿಗಳಾದ ಅರಿಬಮ್ ಗುಣೇಶ್ವರ್ ಶರ್ಮಾ ಮತ್ತು ಗೊಲ್ಮೆಯ್ ಗೈಫುಲ್‌ಶಿಲ್ಲು ಕಬುಯಿ ಅವರನ್ನು ಮಣಿಪುರ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸುವ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್​ ಅನುಮೋದಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Wed, 11 January 23