ಕರ್ನಾಟಕದ ನಾಲ್ವರು ಸೇರಿದಂತೆ ಒಟ್ಟು ಏಳು ಮಂದಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ
ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಸೋಮವಾರ ಆದೇಶಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ನ ನಾಲ್ವರು ನ್ಯಾಯಾಧೀಶರನ್ನು ಮದ್ರಾಸ್, ಕೇರಳ, ಗುಜರಾತ್ ಹೈಕೋರ್ಟ್‌ಗಳಿಗೆ ವರ್ಗಾಯಿಸಲಾಗಿದೆ. ಅದೇ ರೀತಿಯಾಗಿ ಇತರೆ ರಾಜ್ಯಗಳಿಂದ ಕೆಲವು ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಆಕ್ಷೇಪ ಕೂಡ ವ್ಯಕ್ತವಾಗಿದೆ.

ಬೆಂಗಳೂರು, ಏಪ್ರಿಲ್ 21: ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು (High Court Judges) ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ (Supreme Court) ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಯಾರೆಲ್ಲಾ ವರ್ಗಾವಣೆ ಮತ್ತು ಎಲ್ಲಿಗೆ?
- ನ್ಯಾ. ಹೇಮಂತ್ ಚಂದನ ಗೌಡರ್: ಕರ್ನಾಟಕ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ.ಕೃಷ್ಣನ್ ನಟರಾಜನ: ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ. ಎನ್. ಶ್ರೀನಿವಾಸ ಸಂಜಯ್ ಗೌಡ: ಕರ್ನಾಟಕ ಹೈಕೋರ್ಟ್‌ನಿಂದ ಗುಜರಾತ್ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ.ಕೃಷ್ಣ ದೀಕ್ಷಿತ್: ಕರ್ನಾಟಕ ಹೈಕೋರ್ಟ್‌ನಿಂದ ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ.ಪೆರುಗು ಶ್ರೀಸುಧ: ತೆಲಂಗಾಣ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ.ಕೆ.ಸುರೇಂದರ್: ತೆಲಂಗಾಣ ಹೈಕೋರ್ಟ್‌ನಿಂದ ಮದ್ರಾಸ್ ಹೈಕೋರ್ಟ್‌ಗೆ ವರ್ಗಾವಣೆ
- ನ್ಯಾ.ಡಾ.ಕೆ.ಮನ್ಮಧ ರಾವ್: ಆಂಧ್ರಪ್ರದೇಶ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ
ಇದನ್ನೂ ಓದಿ: ನಾಳೆಯಿಂದ ಏಪ್ರಿಲ್ 24 ರ ವರಗೆ ಮಲೆ ಮಹದೇಶ್ವರ ಬೆಟ್ಟ ಪ್ರವಾಸ, ವಾಸ್ತವ್ಯ ಯೋಜನೆ ಇದ್ದರೆ ಗಮನಿಸಿ
ಇತ್ತ ಸುಪ್ರೀಂಕೋರ್ಟ್ ಶಿಫಾರಸ್ಸಿಗೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ದಕ್ಷ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸದಂತೆ ಒತ್ತಾಯಿಸಿದೆ.
ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲೆ ಹಲ್ಲೆಗೆ ಖಂಡನೆ: ನೂರಾರು ವಕೀಲರಿಂದ ಪ್ರತಿಭಟನೆ
ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರು ವಕೀಲರ ಸಂಘದಿಂದ ಸಿವಿಲ್ ಕೋರ್ಟ್ ಮುಂದೆ ನೂರಾರು ವಕೀಲರಿಂದ ಪ್ರತಿಭಟನೆ ಮಾಡಲಾಗಿದೆ. ಏ.16ರಂದು ವಕೀಲರ ಕಚೇರಿಯಲ್ಲಿಯೇ ಅಪರಿಚಿತರಿಂದ ಹಲ್ಲೆ ಮಾಡಲಾಗಿತ್ತು. ಹಲ್ಲೆಯಿಂದ ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಗಾಯಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:10 pm, Mon, 21 April 25