
ಬೆಂಗಳೂರು, ಏಪ್ರಿಲ್ 21: ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು (High Court Judges) ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ (Supreme Court) ಕೊಲಿಜಿಯಂನಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಹಿನ್ನಲೆ ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ. ಹೈಕೋರ್ಟ್ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯಲ್ಲಿ ಏಪ್ರಿಲ್ 15 ಮತ್ತು 19 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಲಾಗಿತ್ತು. ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿಕೆ ಪ್ರಕಾರ, ಹೈಕೋರ್ಟ್ ಆಡಳಿತ ವ್ಯವಸ್ಥೆ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ನಾಳೆಯಿಂದ ಏಪ್ರಿಲ್ 24 ರ ವರಗೆ ಮಲೆ ಮಹದೇಶ್ವರ ಬೆಟ್ಟ ಪ್ರವಾಸ, ವಾಸ್ತವ್ಯ ಯೋಜನೆ ಇದ್ದರೆ ಗಮನಿಸಿ
ಇತ್ತ ಸುಪ್ರೀಂಕೋರ್ಟ್ ಶಿಫಾರಸ್ಸಿಗೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ದಕ್ಷ ನ್ಯಾಯಮೂರ್ತಿಗಳನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸದಂತೆ ಒತ್ತಾಯಿಸಿದೆ.
ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಬೆಂಗಳೂರು ವಕೀಲರ ಸಂಘದಿಂದ ಸಿವಿಲ್ ಕೋರ್ಟ್ ಮುಂದೆ ನೂರಾರು ವಕೀಲರಿಂದ ಪ್ರತಿಭಟನೆ ಮಾಡಲಾಗಿದೆ. ಏ.16ರಂದು ವಕೀಲರ ಕಚೇರಿಯಲ್ಲಿಯೇ ಅಪರಿಚಿತರಿಂದ ಹಲ್ಲೆ ಮಾಡಲಾಗಿತ್ತು. ಹಲ್ಲೆಯಿಂದ ಹಿರಿಯ ವಕೀಲ ವೈ.ಆರ್.ಸದಾಶಿವರೆಡ್ಡಿ ಗಾಯಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:10 pm, Mon, 21 April 25