DK Shivakumar Case: ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್​, ಸಿಬಿಐಗೆ ಮತ್ತೆ ನಿರಾಸೆ

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸುಪ್ರೀಂಕೋರ್ಟ್​ನಲ್ಲೂ ಬಿಗ್​ ರಿಲೀಫ್​ ಸಿಕ್ಕಿದೆ.

DK Shivakumar Case: ಡಿಕೆ ಶಿವಕುಮಾರ್​​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್​, ಸಿಬಿಐಗೆ ಮತ್ತೆ ನಿರಾಸೆ
Edited By:

Updated on: Jul 31, 2023 | 12:42 PM

ನವದೆಹಲಿ/ಬೆಂಗಳೂರು, (ಜುಲೈ 31): ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ(DK Shivakumar) ಸುಪ್ರೀಂಕೋರ್ಟ್​ನಲ್ಲೂ (Supreme Court) ಬಿಗ್​ ರಿಲೀಫ್​ ಸಿಕ್ಕಿದೆ. ಡಿಕೆ ಶಿವಕುಮಾರ್​ ವಿರುದ್ಧದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಡಿಕೆ ಶಿವಕುಮಾರ್​ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿತ್ತು. ಆದ್ರೆ, ಸುಪ್ರೀಂಕೋರ್ಟ್ ಇಂದು(ಜುಲೈ 31) ಸಿಬಿಐ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಡಿಕೆ ಶಿವಕುಮಾರ್​​ ನಿರಾಳರಾಗಿದ್ದಾರೆ.

ಇದನ್ನೂ ಓದಿ: DK Shivakumar: ಕಾಂಗ್ರೆಸ್ ಸರ್ಕಾರದಿಂದ ಈ ವರ್ಷ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಡಿಕೆ ಶಿವಕುಮಾರ್; ಕಾರಣ ಇಲ್ಲಿದೆ

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ಹೇಳಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13(2), 13(1)ಇ ಅಡಿಯಲ್ಲಿ ಸಿಬಿಐ 2020ರ ಅಕ್ಟೋಬರ್ 3ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು. ಅಲ್ಲದೇ 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು ಇದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು. ಇದೇ ಅದೇ ತಡೆಯಾಜ್ಞೆ ವಿಸ್ತರಣೆಯಾಗುತ್ತಾ ಬಂದಿದ್ದು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

Published On - 12:30 pm, Mon, 31 July 23

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us