ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿ ವಜಾ, ಜಮೀರ್ ಅಹಮ್ಮದ್ ಖಾನ್ ನಿರಾಳ
ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ ಎಂದು ಹೇಳಿ ಜಮೀರ್ ಅಹಮ್ಮದ್ ಅವರ ಶಾಸಕ ಸ್ಥಾನದಿಂದ ವಜಾgಒಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.
ನವದೆಹಲಿ/ಬೆಂಗಳೂರು, (ಮೇ 27): ಜಮೀರ್ ಅಹಮದ್ ಖಾನ್ (zameer Ahmed Khan) ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court) ವಜಾ ಮಾಡಿದೆ. ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಜಮೀರ್ ಅಹಮ್ಮದ್ ಖಾನ್ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಎಂಬುವರ ಅರ್ಜಿ ಸಲ್ಲಿಸಿದ್ದರು. ಇಂದು (ಮೇ 27) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ. ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ. ಇದರಿಂದ ಅಭ್ಯರ್ಥಿ ಭ್ರಷ್ಟನಾಗುತ್ತಾನೆ ಎಂಬ ವಾದ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ರಾಜಕೀಯ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳು ಜನರಿಗೆ ಸಹಾಯಕವಾಗುತ್ತವೆ. ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಇದರಿಂದ ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಚಾರಕ್ಕೆ ಕಾರಣವಾಗುತ್ತದೆ ಎಂಬುದು ಸೂಕ್ತವಾದ ವಾದವಲ್ಲ. ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.
ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಈ ಮೊದಲು ಈ ಅರ್ಜಿ ಕರ್ನಾಟಕ ಹೈಕೋರ್ಟ್ ನಲ್ಲಿ ವಜಾಗೊಂಡಿತ್ತು. ಬಳಿಕ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರ ಶಶಾಂಕ ಜೆ ಶ್ರೀಧರ ಅವರು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಸಹ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ