AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ತೇಜಸ್ವಿ ಸೂರ್ಯಗೆ ಬಿಗ್​ ರಿಲೀಫ್​: ಸುಳ್ಳು ಸುದ್ದಿ ಕೇಸ್​ ಅರ್ಜಿ ವಜಾ, ಸರ್ಕಾರಕ್ಕೆ ಮುಖಭಂಗ

ಹಾವೇರಿ ಜಿಲ್ಲೆಯ ರೈತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದರೆಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾದ ಎಫ್‌ಐಆರ್ ರದ್ದತಿಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ರಾಜಕೀಯ ವಿಷಯಗಳನ್ನು ನ್ಯಾಯಾಲಯಕ್ಕೆ ತರದಂತೆ ಎಚ್ಚರಿಕೆ ನೀಡಿದೆ.

ಸಂಸದ ತೇಜಸ್ವಿ ಸೂರ್ಯಗೆ ಬಿಗ್​ ರಿಲೀಫ್​: ಸುಳ್ಳು ಸುದ್ದಿ ಕೇಸ್​ ಅರ್ಜಿ ವಜಾ, ಸರ್ಕಾರಕ್ಕೆ ಮುಖಭಂಗ
ಸಂಸದ ತೇಜಸ್ವಿ ಸೂರ್ಯ
ಗಂಗಾಧರ​ ಬ. ಸಾಬೋಜಿ
|

Updated on:Jul 21, 2025 | 2:15 PM

Share

ಬೆಂಗಳೂರು, ಜುಲೈ 21: ಹಾವೇರಿ ಜಿಲ್ಲೆಯಲ್ಲಿ ರೈತ ಆತ್ಮಹತ್ಯೆಗ್ಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಸೋಮವಾರ ತಿರಸ್ಕರಿಸಿದೆ. ಆ ಮೂಲಕ ಸಂಸದ ತೇಜಸ್ವಿ ಸೂರ್ಯಗೆ ಬಿಗ್​ ರಿಲೀಫ್​ ಸಿಕ್ಕಿದ್ದು, ಅತ್ತ ಸರ್ಕಾರಕ್ಕೆ  ಮುಖಭಂಗ ಉಂಟಾಗಿದೆ.

ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ ಮಾಡಿದ್ದು, ನ್ಯಾಯಾಂಗ ವೀಕ್ಷಣೆಗೆ ಒಳಪಟ್ಟ ವಿಷಯವಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಸಂಸದ ತೇಜಸ್ವಿ ಸೂರ್ಯಗೆ ರಿಲೀಫ್ ಸಿಕ್ಕಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರದ ಪರ ಸಿಂಘ್ವಿ ವಾದ ಮಂಡಿಸಿದರು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಗರಂ 

ಇನ್ನು ವಿಚಾರಣೆ ವೇಳೆ ಗರಂ ಆದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ಈ ವಿಷಯವನ್ನು ರಾಜಕೀಯಗೊಳಿಸಬೇಡಿ. ನ್ಯಾಯಾಲಯದ ಹೊರಗೆ ಈ ಹೋರಾಟಗಳನ್ನು ಮಾಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
Image
ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್
Image
ವಕ್ಫ್ ವಿವಾದ: ರೈತ ಆತ್ಮಹತ್ಯೆ ಆರೋಪ, ಸರ್ಕಾರದ ವಿರುದ್ದ bjp ಆಕ್ರೋಶ
Image
ಜಂಟಿ ಸದನ ಸಮಿತಿ ಅಧ್ಯಕ್ಷರ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ನಾಯಕರು!
Image
ರಾಜ್ಯ ಸರ್ಕಾರದ ಸೂಚನೆ ಮೇರೆಗೆ ವಕ್ಫ್ ನಮೂದು: ಜಗದಾಂಬಿಕಾ ಪಾಲ್ ಆರೋಪ

ಪ್ರಕರಣದ ಹಿನ್ನೆಲೆ

ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ 2024ರ ನವೆಂಬರ್‌ 14ರಂದು ಎಫ್​ಐಆರ್ ದಾಖಲಾಗಿತ್ತು. ಈ ಬಗ್ಗೆ 2024 ನವೆಂಬರ್ 8ರಂದು, ತೇಜಸ್ವಿ ಸೂರ್ಯ ತಮ್ಮ ಟ್ವೀಟರ್​ನಲ್ಲಿ ರಾಜ್ಯದ ಓರ್ವ ರೈತ ತನ್ನ ಭೂಮಿಯನ್ನು ವಕ್ಫ್ ಮಂಡಳಿಯು ವಶಪಡಿಸಿಕೊಂಡ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್

‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ತೇಜಸ್ವಿ ಸೂರ್ಯ ತಮ್ಮ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ಟ್ವೀಟ್​ ಅನ್ನು ಅಳಿಸಿಹಾಕಲಾಗಿತ್ತು.

ಇದನ್ನೂ ಓದಿ: ವಕ್ಫ್ ವಿವಾದಕ್ಕೆ ಬೇಸತ್ತು ರೈತ ಆತ್ಮಹತ್ಯೆ ಆರೋಪ: ಸರ್ಕಾರದ ವಿರುದ್ದ ಬಿಜೆಪಿ ಆಕ್ರೋಶ

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353(2) ರ ಅಡಿಯಲ್ಲಿ ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಹಾವೇರಿ ಸೈಬರ್ ಅಪರಾಧ, ಆರ್ಥಿಕ ಮತ್ತು ಮಾದಕವಸ್ತು ಅಪರಾಧಗಳ ಪೊಲೀಸರು ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದರು. 2024ರ ಡಿಸೆಂಬರ್​ನಲ್ಲಿ ಈ ಪ್ರಕರಣವನ್ನು ರದ್ದುಗೊಳಿಸಲಾಗಿತ್ತು. ಬಳಿಕ ರಾಜ್ಯ ಸರ್ಕಾರ ಹೈಕೋರ್ಟ್​ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:32 pm, Mon, 21 July 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ