
ಬೆಂಗಳೂರು, ಏಪ್ರಿಲ್ 30: ಮುಖ್ಯಮಂತ್ರಿ ಸಿದ್ದರಾಮಯ್ಯ (Siddadamaiah) ಸೇರಿದಂತೆ ಕಾಂಗ್ರೆಸ್ನ (Congress) ಇತರ ನಾಯಕರಿಗೆ ಸುಪ್ರೀಂಕೋರ್ಟ್ (Supreme Court) ಬಿಗ್ ರಿಲೀಫ್ ನೀಡಿದೆ. 2022 ರಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ನ ಇತರ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರೆ ನಾಯಕರು ಖಂಡಿಸಿ, ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಕಾಂಗ್ರೆಸ್ ನಾಯಕರು ಅರ್ಜಿ ಸಲ್ಲಿಸಿದ್ದರು. ಬುಧವಾರ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಫೆ ನೀಡಿ ವಿಚಾರಣೆ ಮುಂದೂಡಿದೆ.
ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಸಮಿತಿಯು 2022ರ ಜೂನ್ನಲ್ಲಿ ಪ್ರತಿಭಟನೆ ನಡೆಸಿತ್ತು. ಕರೋನಾ ನಿಯಮಗಳನ್ನು ಉಲ್ಲಂಘಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು. ಹೀಗಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ನೋಡಿ: ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ: ಸಿದ್ದರಾಮಯ್ಯ, ಸಿಎಂ
ಪ್ರತಿಭಟನೆಯಿಂದ ಸಾರ್ವಜನಿಕರ ನೆಮ್ಮದಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಇದೇ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಂತರ ರದ್ದುಗೊಳಿಸಿತ್ತು.
Published On - 5:27 pm, Wed, 30 April 25