BBMP ಚುನಾವಣೆಗೆ ‘ಸುಪ್ರೀಂ’ ತಡೆ

BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

BBMP ಚುನಾವಣೆಗೆ ‘ಸುಪ್ರೀಂ’ ತಡೆ
ಸುಪ್ರೀಂ ಕೋರ್ಟ್
Follow us
KUSHAL V
|

Updated on:Dec 18, 2020 | 4:20 PM

ಬೆಂಗಳೂರು: BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

1976ರ ಕೆಎಂಸಿ ಕಾಯ್ದೆಗೆ (ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ) ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ನಡೆಸಿರಲಿಲ್ಲ. ಆದರೆ, ಬಿಬಿಎಂಪಿ ಚುನಾಯಿತ ಕೌನ್ಸಿಲ್ ಅವಧಿ 2020 ಸೆಪ್ಟೆಂಬರ್ 10ಕ್ಕೆ ಮುಗಿದಿತ್ತು. ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್‌ ವಾಜಿದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ವಾರ್ಡ್‌ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.  ಆಗ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಡಿ. 10ರಂದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ

Published On - 4:14 pm, Fri, 18 December 20

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ