AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ, ನಾಳೆ ಅಧಿವೇಶನಕ್ಕೆ ಬರುವಂತೆ ಹೇಳಿದ ತಾತ

ಸಂಸದ ಸ್ಥಾನದಿಂದ ಅನರ್ಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅಸಿಂಧುಗಳಿಸಿ ಕರ್ನಾಟಕ ಹೈಕೋರ್ಟ್​ (Karnataka High Court ) ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ, ನಾಳೆ ಅಧಿವೇಶನಕ್ಕೆ ಬರುವಂತೆ ಹೇಳಿದ ತಾತ
ಹರೀಶ್ ಜಿ.ಆರ್​.
| Updated By: ರಮೇಶ್ ಬಿ. ಜವಳಗೇರಾ|

Updated on:Sep 18, 2023 | 6:21 PM

Share

ನವದೆಹಲಿ, (ಸೆಪ್ಟೆಂಬರ್ 18): ಪ್ರಜ್ವಲ್ ರೇವಣ್ಣ(Prajwal revanna) ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ (Karnataka High Court ) ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಎ.ಮಂಜು, ದೇವರಾಜೇಗೌಡ ಅವರು ಹೈಕೋರ್ಟ್​ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋಕೋರ್ಟ, ಪ್ರಜ್ವಲ್​ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಇದರಿಂದ ಸಂಕಷ್ಟ ಸಿಲುಕಿದ್ದ ಪ್ರಜ್ವಲ್ ರೇವಲ್ ರೇವಣ್ಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇಂದು(ಸೆಪ್ಟೆಂಬರ್ 18) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಜೆಐ ಪೀಠ, ಕರ್ನಾಟಕ ಹೈಕೋರ್ಟ್ ಅಸಿಂಧು ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಹಾಸನ: ಸಂಸದ ಪ್ರಜ್ವಲ್​ ರೇವಣ್ಣ ಅನರ್ಹಕ್ಕೆ ಯಾವ್ಯಾವ ಕೇಸ್​ಗಳು ಗೊತ್ತಾ? ವಕೀಲರು ಹೇಳಿದ್ದಿಷ್ಟು

ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್, ಪರಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ, ಮುಂದಿನ ನಾಲ್ಕು ವಾರಗಳ ಅವಧಿಗೆ ಈ ತಡೆಯಾಜ್ಞೆ ನೀಡಿದೆ. ಆದರೆ, ಕೆಲವು ಷರತ್ತುಗಳನ್ನು ವಿಧಿಸಿದೆ. ಲೋಕಸಭೆಯಲ್ಲಿ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣಗೆ ಯಾವುದೇ ವೋಟಿಂಗ್ ಪವರ್ ಇರುವುದಿಲ್ಲ. ಸರ್ಕಾರದಿಂದ ಬರುವ ಭತ್ಯೆಗಳನ್ನ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇನ್ನು ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರೇವಣ್ಣ ಅವರು ಹೆಚ್​ಡಿ ದೇವೇಗೌಡಗೆ ಕರೆ ಮಾಡಿ ಚರ್ಚಿಸಿದರು. ಈ ವೇಳೆ ನಾಳೆ (ಸೆಪ್ಟೆಂಬರ್ 19) ದೆಹಲಿಗೆ ಬಂದು ಸಂಸತ್ ಕಲಾಪಕ್ಕೆ ಹಾಜರಾಗುವಂತೆ ದೇವೇಗೌಡ ಅವರು ಪ್ರಜ್ವಲ್​ಗೆ ಹೇಳಿದ್ದಾರೆ. ಅದರಂತೆ ಪ್ರಜ್ವಲ್ ರೇವಣ್ಣ ಅವರು ನಾಳೆಯಿಂದ ಹೊಸ ಸಂಸತ್‌ ಭವನದಲ್ಲಿ ಆರಂಭವಾಗಲಿರುವ ವಿಶೇಷ ಅಧಿವೇಶನಕ್ಕೆ ಹಾಜರಾಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:04 pm, Mon, 18 September 23