Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab verdict: ಹೀಜಾಬ್ ತೀರ್ಪು ಪ್ರಕಟ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್

ಇಂದು ಸುಪ್ರೀಂ ಕೋರ್ಟ್ ಹಿಜಾಬ್ ಕುರಿತ ತೀರ್ಪು ಪ್ರಕಟಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದ ವಿವಿಧ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

Hijab verdict: ಹೀಜಾಬ್ ತೀರ್ಪು ಪ್ರಕಟ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್
ಹೀಜಾಬ್ ತೀರ್ಪು ಪ್ರಕಟ ಹಿನ್ನೆಲೆ ಕರ್ನಾಟಕದಲ್ಲಿ ಹೈ ಅಲರ್ಟ್
Follow us
TV9 Web
| Updated By: Rakesh Nayak Manchi

Updated on:Oct 13, 2022 | 9:56 AM

ಬೆಂಗಳೂರು: ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಕೆಲವು ಮುಸ್ಲಿಂ ಮಹಿಳೆಯರು ಧರಿಸುವ ಹಿಜಾಬ್​​ಗೆ (Hijab) ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ (Supreme Court) ತೀರ್ಪನ್ನು ಗುರುವಾರ ಇಬ್ಬರು ನ್ಯಾಯಾಧೀಶರು ಪ್ರಕಟಿಸುವ ಸಾಧ್ಯತೆ ಇದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಅವರು ವಿವಿಧ ವಿಭಾಗಗಲ್ಲಿನ ಪೊಲೀಸ್ ಠಾಣೆಗಳಿಗೆ ಸೂಚನೆ ನೀಡಿದ್ದಾರೆ.

ಕರಾವಳಿ ಭಾಗವಾಗಿರುವ ಉಡುಪಿ ಜಿಲ್ಲೆಯಲ್ಲಿ ಹತ್ತಿಕೊಂಡ ಹಿಜಾಬ್​ ವಿವಾದದ ಸಣ್ಣ ಕಿಡಿ ರಾಜ್ಯಾದ್ಯಂತ ಹರಡಿತ್ತು. ಈ ವಿವಾದವು ಹೈಕೋರ್ಟ್ ಮೆಟ್ಟಿಲೇರಿ ಶಾಲಾ ಕಾಲೇಜುಗಳ ತರಗತಿಯ ಒಳಗೆ ಹಿಜಾಬ್ ಧರಿಸದಂತೆ ತೀರ್ಪು ಪ್ರಕಟಗೊಂಡಿತ್ತು. ಆದರೆ ಇದನ್ನು ಪ್ರಶ್ನಿಸಿದ ಮುಸ್ಲಿಂ ಮಹಿಳೆಯರು ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕಿದ್ದರು. ಅದರಂತೆ ವಿಚಾರಣೆ ನಡೆಸಿರುವ ಕೋರ್ಟ್ ಇಂದು ತೀರ್ಪು ಪ್ರಕಟಿಸಲಿದೆ. ಈ ನಿಟ್ಟಿನಲ್ಲಿ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.

ಹಿಜಾಬ್ ಕುರಿತು​ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆ ತೀರ್ಪು ಮುಸ್ಲಿಂ ಪರ ಬಂದರೆ ಈ ಸಮುದಾಯದವರು ಸಂಭ್ರಮಿಸುವ ಸಾಧ್ಯತೆ ಇದೆ, ಇದೇ ಸಮಯದಲ್ಲಿ ಹಿಂದೂ ಸಮುದಾಯದವರು ವಿರೋಧಿಸುವ ಸಾಧ್ಯತೆ ಕೂಡ ಇದೆ. ಹಿಜಾಬ್ ವಿರೋಧವಾಗಿ ತೀರ್ಪು ಬಂದರೆ ಮುಸ್ಲಿಂ ಸಮುದಾಯದವರು ಧರಣಿ, ಪ್ರತಿಭಟನೆ ಮಾಡುವ‌ ಸಾಧ್ಯತೆ ಇದೆ. ಈ ಸಂಬಂಧ ಮಾಹಿತಿ ಸಂಗ್ರಹಿಸಬೇಕು. ಹೀಗಾಗಿ ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಅವರು ಹೆಚ್ಚುವರಿ ಆಯುಕ್ತರು ಮತ್ತು ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅದರಂತೆ ನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತುಮಕೂರು ಜಿಲ್ಲಾದ್ಯಂತ ಹೈ ಅಲರ್ಟ್

ತೀರ್ಪು ಹೊರಬೀಳುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮವಾಗಿ ಹೈ ಅಲರ್ಟ್ ಘೋಷಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿರುವ ಪೊಲೀಸರು, ತುಮಕೂರು ನಗರ, ಶಿರಾ ಹಾಗೂ ತಿಪಟೂರು ನಗರದಲ್ಲಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಈಗಾಗಲೇ ಹಲವು ಮುಖಂಡರ ಜೊತೆ ಸಭೆ ನಡೆಸಿರುವ ಜಿಲ್ಲಾ ಎಸ್​ಪಿ ರಾಹುಲ್ ಕುಮಾರ್, ತೀರ್ಪು ಏನೇ ಬಂದರೂ ಕೂಡ ಶಾಂತಿಯುತವಾಗಿ ಸ್ವಾಗತ ಮಾಡುವಂತೆ ಮನವಿ ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದ್ದು, ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರ ಭದ್ರತೆ ಕೈಗೊಳ್ಳಲಾಗಿದೆ ಎಂದು ಟಿವಿ9 ಜೊತೆಗೆ ತುಮಕೂರು ಎಸ್​ಪಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 am, Thu, 13 October 22