ಬೆಂಗಳೂರಿನ ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ ಟಿಡಿಆರ್​​ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಬೆಂಗಳೂರು ಅರಮನೆ ಮೈದಾನದ ಭೂವಿವಾದದಲ್ಲಿ ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ರಾಜಮನೆತನಕ್ಕೆ 3000 ಕೋಟಿ ರೂ. ಮೌಲ್ಯದ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆ ಮೂಲಕ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ ಸುಪ್ರೀಂ, ಟಿಡಿಆರ್ ಅನ್ನು ತಕ್ಷಣ ನೀಡುವಂತೆ ಸೂಚಿಸಿದೆ.

ಬೆಂಗಳೂರಿನ ಅರಮನೆ ಜಮೀನು ವಿವಾದ: ರಾಜಮನೆತನಕ್ಕೆ ಟಿಡಿಆರ್​​ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಸುಪ್ರೀಂಕೋರ್ಟ್
Edited By:

Updated on: May 22, 2025 | 1:39 PM

ಬೆಂಗಳೂರು, ಮೇ 22: ಬೆಂಗಳೂರು ಅರಮನೆ ಮೈದಾನದ ಭೂ ವಿವಾದ ಪ್ರಕರಣಕ್ಕೆ (bengaluru palace land case) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ ಆಗಿದೆ. ಅರಮನೆ ಮೈದಾನದ 15 ಎಕರೆಗೂ ಹೆಚ್ಚು ಭೂಮಿಗೆ ಮೂರು ಸಾವಿರ ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು ಅಂದರೆ ಟಿಡಿಆರ್ ನೀಡಲು ರಾಜಮನೆತನಕ್ಕೆ ಸುಪ್ರೀಂಕೋರ್ಟ್ (Supreme Court) ಆದೇಶಿಸಿದೆ. ನ್ಯಾ ಅರವಿಂದ್ ಕುಮಾರ್​ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಕೂಡಲೇ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಆದೇಶ ಹೊರಡಿಸಲಾಗಿದೆ.

ಒಂದು ವಾರದೊಳಗೆ ಟಿಡಿಆರ್ ಠೇವಣಿ ಇಡುವಂತೆ ರಾಜ್ಯ ಸರ್ಕಾರಕ್ಕೆ ಈ ಹಿಂದೆ ಸೂಚಿಸಲಾಗಿತ್ತು. ಅದರಂತೆ ಬರೋಬ್ಬರಿ 3400 ಕೋಟಿ ರೂ. ಮೊತ್ತದ ಟಿಡಿಆರ್​ ಅನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ರಿಜಿಸ್ಟ್ರಾರ್​ನಲ್ಲಿ ಇಡಲಾಗಿತ್ತು. ಇದನ್ನು ರಾಜಮನೆತನದ ಪರ ವಕೀಲರು ವಿರೋಧಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನ ಅರಮನೆ ಜಮೀನು ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ ಕೋರ್ಟ್

ಇದನ್ನೂ ಓದಿ
ಬೆಂಗಳೂರು ಅರಮನೆ ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ
ಅರಮನೆ ಮೈದಾನ ಬಳಕೆಗೆ ಸುಗ್ರೀವಾಜ್ಞೆ ಅಸ್ತ್ರ ಯಶಸ್ವಿ: ರಾಜ್ಯಪಾಲರಿಂದ ಅಂಕಿತ
ಅರಮನೆ, ಸರ್ಕಾರದ ಮಧ್ಯೆ ಕಾನೂನು ಸಮರ‌: ನಾಳೆ ತುರ್ತು ಸಂಪುಟ ಸಭೆ ಕರೆದ ಸಿಎಂ
ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ: ಕಾಂಗ್ರೆಸ್ ವಿರುದ್ಧ ಬಿಜೆಪಿ ರೋಷ

ಈ ಟಿಡಿಆರ್​ಗಳನ್ನು ರಾಜಮನೆತನಕ್ಕೆ ನೀಡಬಾರದು ಎಂದು ರಾಜ್ಯ ಸರ್ಕಾರವು ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಿತ್ತು. ಇದೀಗ ಅಂತಿಮವಾಗಿ ರಾಜಮನೆತನಕ್ಕೆ ಟಿಡಿಆರ್ ನೀಡುವಂತೆ ಸುಪ್ರೀಂಕೋರ್ಟ್​ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರು ಅರಮನೆ ಮೈದಾನದ ಬಳಿ ರಸ್ತೆ ಅಗಲೀಕರಣಕ್ಕಾಗಿ ಒಟ್ಟು 15.36 ಎಕರೆ ಜಮೀನು ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಎಕರೆಗೆ 200 ಕೋಟಿ ರೂಪಾಯಿಯಂತೆ 3ಸಾವಿರದ 400 ಕೋಟಿ ಟಿಡಿಆರ್ ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ ಟಿಡಿಆರ್ ನೀಡಲು ಒಪ್ಪದ ಸರ್ಕಾರ ಸುಗ್ರೀವಾಜ್ಞೆ ಅಸ್ತ್ರ ಹೂಡಿತ್ತು. ಹೀಗಾಗಿ ಸುಗ್ರೀವಾಜ್ಞೆ ಮತ್ತು ಪರಿಹಾರ ನೀಡದ್ದಕ್ಕೆ ರಾಜಮನೆತನ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೋಷಾವೇಷ

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಕಪಿಲ್‌ ಸಿಬಲ್‌, ಜಮೀನನ್ನೂ ಸಂಪೂರ್ಣವಾಗಿ ಬಳಸಿಕೊಂಡಿಲ್ಲ, ಬಳಸಿಕೊಳ್ಳದ ಜಮೀನಿಗೆ ಟಿಡಿಆರ್ ನೀಡುವುದಾದರೂ ಹೇಗೆ? ಅಂತಾ ವಾದಿಸಿದ್ದರು. ವಾದ ಆಲಿಸಿದ್ದ ಸುಪ್ರೀಂಕೋರ್ಟ್ ಟಿಡಿಆರ್ ಅನ್ನ ಕೋರ್ಟ್‌ನಲ್ಲೇ ಠೇವಣಿ ಇಡುವಂತೆ ಈ ಹಿಂದೆ ಸೂಚಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:25 pm, Thu, 22 May 25

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us