ಅಸಹಜ ಲೈಂಗಿಕ ದೌರ್ಜನ್ಯ ಗಂಭೀರ ಅಪರಾಧ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

| Updated By: ರಮೇಶ್ ಬಿ. ಜವಳಗೇರಾ

Updated on: Jul 09, 2024 | 5:04 PM

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಅಸಹಜ ಲೈಂಗಿಕ ದೌರ್ಜನ್ಯ ಗಂಭೀರ ಅಪರಾಧ ಎಂದು ಹೇಳಿ ಸೂರಜ್ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕೃತ ಮಾಡಿದೆ. ಇದರಿಂದ ರೇವಣ್ಣ ಕುಟುಂಬಕ್ಕೆ ಹಿನ್ನಡೆಯಾಗಿದೆ.

ಅಸಹಜ ಲೈಂಗಿಕ ದೌರ್ಜನ್ಯ ಗಂಭೀರ ಅಪರಾಧ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ
ಸೂರಜ್.
Follow us on

ಬೆಂಗಳೂರು, (ಜುಲೈ 09): ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮಾಜಿ ಸಚಿವ ರೇವಣ್ಣನವರ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ಜಾಮೀನು ಅರ್ಜಿ ವಜಾ ಆಗಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂಬಂದ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈಗ ಸೂರಜ್ ಮುಂದಿನ ಹಾದಿ ಹೈಕೋರ್ಟ್​. ಜಾಮೀನಿಗಾಗಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಿಆರ್‌ಪಿಸಿ 437 ಅಡಿ ಸೂರಜ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರೆ, ಪೊಲೀಸರ ಪರ ಎಸ್‌ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿದ್ದರು.

ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜುಲೈ 3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ನ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದರು. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು.

ಬಳಿಕ ಇದೇ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಈಗಾಗಲೇ ಕೋರ್ಟ್, ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯ ಸೂರಜ್​ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Tue, 9 July 24