ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ

ಕಾಂಗ್ರೆಸ್​ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಮಣೆ ಹಾಕಿದೆ.

ಸುರುಪುರ ಕ್ಷೇತ್ರಕ್ಕೆ ಉಪ ಚುನಾವಣೆ: ಬಿಜೆಪಿಯಿಂದ ರಾಜುಗೌಡ ಸ್ಪರ್ಧೆ
ಮಾಜಿ ಬಿಜೆಪಿ ಶಾಸಕ ರಾಜುಗೌಡ
Follow us
TV9 Web
| Updated By: ವಿವೇಕ ಬಿರಾದಾರ

Updated on:Mar 26, 2024 | 2:32 PM

ಬೆಂಗಳೂರು, ಮಾರ್ಚ್​ 26: ಕಾಂಗ್ರೆಸ್​ (Congress) ಶಾಸಕ ರಾಜ ವೆಂಕಟಪ್ಪ ನಾಯಕ (Raja Venkatappa Nayak) ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ (Surapura Vidhana Sabha Constituency) ಉಪ ಚುನಾವಣೆ ಮೇ 7 ರಂದು ನಡೆಯಲಿದೆ. ಬಿಜೆಪಿ (BJP) ಟಿಕೆಟ್​ ಘೋಷಣೆ ಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ (Raju Gowda) ಅವರಿಗೆ ಮತ್ತೆ ಮಣೆ ಹಾಕಿದೆ. ಇನ್ನು ಕಾಂಗ್ರೆಸ್​ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಈಗಾಗಲೆ ಟಿಕೆಟ್ ನೀಡಿದೆ.

ನರಸಿಂಹ ನಾಯಕ್ (ರಾಜುಗೌಡ) ಅವರು ಅತಿ ಕಡಿಮೆ ವಯಸ್ಸಿನಲ್ಲಿ ರಾಜಕೀಯಕ್ಕೆ ದುಮುಕಿದರು. ಅವರು 21ನೇ ವಯಸ್ಸಿನಲ್ಲಿ ಕೊಡೇಕಲ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ವೃತ್ತಿಜೀವನ ಪ್ರಾರಂಭಿಸಿದರು. ರಾಜುಗೌಡ ಅವರು 2004ರಲ್ಲಿ ಕನ್ನಡ ನಾಡು ಪಕ್ಷದಿಂದ ಸುರುಪುರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. ತಮ್ಮ 25ನೇ ವಯಸ್ಸಿನಲ್ಲೇ ವಿಧಾನಸಭೆಗೆ ಪ್ರವೇಶಿಸುವ ಮೂಲಕ ಆ ಸಮಯದಲ್ಲಿ ಅವರು ಅತ್ಯಂತ ಕಿರಿಯ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಸುರಪುರದಲ್ಲಿ ಅನುಕಂಪ ಅಲೆ: ಶಾಸಕ ಪುತ್ರ ಅಥವಾ ಸೋತ ಬಿಜೆಪಿ ಅಭ್ಯರ್ಥಿ

2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಇವರಿಗೆ ಟಿಕೆಟ್‌ ನೀಡಿತು. ಈ ಚುನಾವಣೆಯಲ್ಲಿ ರಾಜುಗೌಡ ಗೆದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ವಿರುದ್ಧ ಸೋತಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೆಂಕಟಪ್ಪ ನಾಯಕ್ ಅವರನ್ನು ಸೋಲಿಸುವ ಮೂಲಕ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದರು.

2023ರ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ರಾಜುಗೌಡ 25 ಸಾವಿರ ಮತಗಳ ಅಂತರದಿಂದ ಸೋತರು. ಚುನಾವಣೆ ನಡೆದು ಕೆಲವೆ ತಿಂಗಳು ಕಳೆದಿದ್ದು, ರಾಜ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನರಾದರು. ಈ ಹಿನ್ನೆಲೆಯಲ್ಲಿ ಇದೀಗ ಉಪ ಚುನಾವಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:29 pm, Tue, 26 March 24

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ