ದಿ. ಸುರೇಶ್ ಅಂಗಡಿ ತಾಯಿ ಸೋಮವ್ವ ಅಂಗಡಿ ನಿಧನ; ಇಂದು ಸಂಜೆ ಅಂತ್ಯಕ್ರಿಯೆ
ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ ಇಂದು(ಗುರವಾರ) ಬೆಳಿಗ್ಗೆ ಕೆ.ಕೆ.ಕೊಪ್ಪ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಬೆಳಗಾವಿ: ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ತಾಯಿ ಸೋಮವ್ವ ಅಂಗಡಿ ಇಂದು(ಗುರವಾರ) ಬೆಳಿಗ್ಗೆ ಕೆ.ಕೆ.ಕೊಪ್ಪ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಸೋಮವ್ವನವರಿಗೆ 90 ವರ್ಷ ವಯಸ್ಸಾಗಿತ್ತು. ಇಂದು ಸಂಜೆ ಅವರ ಗ್ರಾಮದಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಸೇರಿ ಹಲವು ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ.
ಬೆಳಗಾವಿ ತಾಲೂಕಿನ ಕೆ.ಕೆ ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ಕೊನೆಯುಸಿರೆಳೆದಿದ್ದಾರೆ. ಸೋಮವ್ವ ಅಂಗಡಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಐವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯರಿದ್ದಾರೆ. ಸುರೇಶ ಅಂಗಡಿ ಮೇಲೆ ಅತ್ಯಂತ ಪ್ರೀತಿ ಹೊಂದಿದ್ದ ಸೋಮವ್ವ ಅಂಗಡಿ ಇಂದು ನಿಧನರಾಗಿದ್ದಾರೆ.
ದಿ.ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ಮಾನಸಿಕವಾಗಿ ನೊಂದಿದ್ದರು. ಸುರೇಶ ಅಂಗಡಿ ನಿಧನ ಹೊಂದಿ ಆರೇ ತಿಂಗಳಲ್ಲಿ ಅವರ ತಾಯಿ ಸೋಮವ್ವ ಅಂಗಡಿ ಕೂಡ ವಿಧಿವಶರಾಗಿದ್ದಾರೆ. ಇಂದು ಸಂಜೆ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಸುರೇಶ್ ಅಂಗಡಿ ಕಿರಿಯ ಪುತ್ರಿ ಶ್ರದ್ಧಾ ಶೆಟ್ಟರ್‌ಗೆ ಸಿಗುತ್ತಾ ಬಿಜೆಪಿ ಟಿಕೆಟ್?
ಇದನ್ನೂ ಓದಿ: ಶಿಸ್ತಿನ ಸಿಪಾಯಿ ಸುರೇಶ್ ಅಂಗಡಿ MASK ಹಾಕಿದ್ದರೆ ಸಾಯುತ್ತಿರಲಿಲ್ಲ: MP ರೇಣುಕಾಚಾರ್ಯ
Published On - 12:21 pm, Thu, 11 March 21