ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ವಿಚಾರ; ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವ ಸುರೇಶ್ ಕುಮಾರ್

ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗೆ ಕ್ಷೇತ್ರದ ಶಾಸಕರು ಮನವಿ ಮಾಡಿದರು. ಶಿಕ್ಷಕರ ಪದವೀಧರ ಕ್ಷೇತ್ರಗಳ ಶಾಸಕರ ನಿಯೋಗದೊಂದಿಗೆ ಸುರೇಶ್ ಕುಮಾರ್ ತೆರಳಿದ್ದರು.

ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ವಿಚಾರ; ಮುಖ್ಯಮಂತ್ರಿ ಭೇಟಿ ಮಾಡಿದ ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
sandhya thejappa
|

Updated on: May 26, 2021 | 1:07 PM

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಒಬ್ಬೊಬ್ಬರು ಒಂದೊಂದು ರೀತಿ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಕೊರೊನಾ ನಿಯಂತ್ರಿಸಲು ಸರ್ಕಾರ ಅನಿವಾರ್ಯವಾಗಿ ಲಾಕ್​ಡೌನ್​ ವಿಧಿಸಿದೆ. ಲಾಕ್​ಡೌನ್​ ಜಾರಿಯಾಗಿದ್ದರಿಂದ ಕೊರೊನಾ ನಿಯಂತ್ರಿಸಲು ಸಾಧ್ಯವಾಗುತ್ತಿದೆ. ಆದರೆ ಇದರ ಬೆನ್ನಲ್ಲೆ ಹಲವು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಈಗಾಗಲೇ ಖಾಸಗಿ ಶಾಲಾ ಶಿಕ್ಷಕರ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ನೀಡುವ ವಿಚಾರಕ್ಕೆ ಸಂಬಂಧಿಸಿ ಶಿಕ್ಷಕರ ಪದವೀಧರ ಕ್ಷೇತ್ರದ ಶಾಸಕರೊಂದಿಗೆ ಸಚಿವ ಸುರೇಶ್ ಕುಮಾರ್ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದರು.

ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಕೇತರರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಸಮುದಾಯಕ್ಕೆ ಸರ್ಕಾರದಿಂದ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ರಾಜ್ಯದ ಮುಖ್ಯಮಂತ್ರಿಗೆ ಕ್ಷೇತ್ರದ ಶಾಸಕರು ಮನವಿ ಮಾಡಿದರು. ಶಿಕ್ಷಕರ ಪದವೀಧರ ಕ್ಷೇತ್ರಗಳ ಶಾಸಕರ ನಿಯೋಗದೊಂದಿಗೆ ಸುರೇಶ್ ಕುಮಾರ್ ತೆರಳಿದ್ದರು. ಸಚಿವ ಸುರೇಶ್ ಕುಮಾರ್ ಜೊತೆ ವಿಧಾನ ಪರಿಷತ್ತಿನ ಸದಸ್ಯ ಡಾ.ವೈ.ಎ.ನಾರಾಯಣ ಸ್ವಾಮಿ, ಪುಟ್ಟಣ್ಣ, ಅರುಣ ಶಹಾಪುರ, ಶಶೀಲ್ ನಮೋಷಿ, ಸಂಕನೂರ, ಹಙಮಂತ ನಿರಾಣಿ ಹಾಗೂ ಚಿದಾನಂದ ಗೌಡ ಭಾಗಿಯಾಗಿದ್ದರು.

ಶಿಕ್ಷಕ ಸಮುದಾಯದ ಸ್ಥಿತಿ ಶೋಚನೀಯವಾಗಿದೆ. ದೈನಂದಿನ ಜೀವನ ನಿರ್ವಹಣೆಯೂ ದುಸ್ತರವಾಗಿದೆ. ಜೀವನ ನಡೆಸಲು ಶಿಕ್ಷಕ ಸಮುದಾಯದ ಹಲವರು ಹಣ್ಣು, ತರಕಾರಿ ಮಾರುತ್ತಿದ್ದು, ಕೂಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಮಕ್ಕಳ ಹಿತ ಕಾಯುವ ಸಮುದಾಯವನ್ನು ನಾವು ಘನತೆಯಿಂದ ನಡೆಸಿಕೊಳ್ಳುವುದು ಕರ್ತವ್ಯವಾಗಿದೆ. ಸರ್ಕಾರದ ಆರ್ಥಿಕ ಪ್ಯಾಕೇಜ್ ಈ ಸಮುದಾಯಕ್ಕೆ ಆತ್ಮ ವಿಶ್ವಾಸ ತುಂಬಲು ಸಹಕಾರಿಯಾಗಲಿದೆ. ಹೀಗಾಗಿ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ

30 ದಿನಗಳಲ್ಲಿ ದೇಶದ 30 ನಗರಗಳಿಗೆ ಕೊವ್ಯಾಕ್ಸಿನ್ ಲಸಿಕೆ ಪೂರೈಕೆ; ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡ ಭಾರತ್ ಬಯೋಟೆಕ್ ಮುಖ್ಯಸ್ಥೆ

ಕಳೆದುಕೊಂಡ ಸ್ನೇಹಿತೆ ಮತ್ತೆ ಸಿಕ್ಕಿದ್ದಾಳೆ, ಕತ್ತೆಯು ಮಗುವನ್ನು ಅಪ್ಪಿಕೊಂಡಿರುವುದು ಹೇಗೆ ನೋಡಿ; ವೈರಲ್​ ಆಯ್ತು ವಿಡಿಯೋ

(Suresh Kumar appealed to chief minister to announce a package for private school teachers)

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ