Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2021 ಜುಲೈ 20, ಸಂಜೆ 4.30ಕ್ಕೆ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:Jul 19, 2021 | 10:59 AM

ಬೆಂಗಳೂರು: ರಾಜ್ಯದಲ್ಲಿ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ (Second PUC Results 2021) ಪ್ರಕಟವಾಗುತ್ತದೆ. ಸಂಜೆ 4.30ಕ್ಕೆ ಸುಮಾರಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್ ತಿಳಿಸಿದ್ದಾರೆ. ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಎಸ್ಎಸ್ಎಲ್​ಸಿ ಫಲಿತಾಂಶ ಮತ್ತು ಪ್ರಥಮ ಪಿಯುಸಿ ಫಲಿತಾಂಶವನ್ನು ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶವನ್ನು ನೀಡಲಾಗುತ್ತದೆ. ಗ್ರೇಡ್ ಬದಲಿಗೆ ಅಂಕಗಳ ಆಧಾರದಲ್ಲಿ ನಾಳೆ ಫಲಿತಾಂಶ ಹೊರಬೀಳಲಿದೆ.

ಫಲಿತಾಂಶ ನೋಡುವುದು ಹೇಗೆ? ಫಲಿತಾಂಶ ನೀಡಲು ಪಿಯು ಬೋರ್ಡ್ ಮುಂದೆ ಸವಾಲೊಂದು ಎದುರಾಗಿದ್ದು, ನೋಂದಣಿ ಸಂಖ್ಯೆ ಇಲ್ಲದೇ ಫಲಿತಾಂಶ ನೋಡುವುದು ಹೇಗೆ ಎಂಬ ಗೊಂದಲ ಬಗೆಹರಿಸಲು ಪಿಯು ಬೋರ್ಡ್ ಸ್ಪಷ್ಟನೆ ನೀಡಿದೆ. ಪ್ರತಿ ವರ್ಷ ಪರೀಕ್ಷೆಗೆ ಕೊಟ್ಟ ನೋಂದಣಿ ಸಂಖ್ಯೆ ಮೇಲೆ ಫಲಿತಾಂಶ ಸಿಗುತ್ತಿತ್ತು. ಈ ಬಾರಿ ಪರೀಕ್ಷೆಯಾಗದೆ ರಿಜಿಸ್ಟರ್ ನಂಬರ್ ಸಿಕ್ಕಿಲ್ಲ. ಹೀಗಾಗಿ, ಫಲಿತಾಂಶ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸದಾಗಿ ರಿಜಿಸ್ಟರ್ ನಂಬರ್ ಜನರೇಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ. Know my number ಆಯ್ಕೆಯನ್ನು ಪಿಯು ವೆಬ್​ಸೈಟ್​ ಮೂಲಕ ವಿದ್ಯಾರ್ಥಿಗಳು ಪರಿಶೀಲಿಸಬಹುದು.

ವಿದ್ಯಾರ್ಥಿಗಳಿಗೆ ಎಸ್ಎಂಸ್ ಮೂಲಕ ತಿಳಿಸುವುದರೊಂದಿಗೆ ಆಯಾ ಕಾಲೇಜಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ. ಫಲಿತಾಂಶ ಮುನ್ನ ತಮ್ಮ ರಿಜಿಸ್ಟರ್ ನಂಬರನ್ನು ವಿದ್ಯಾರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಜನರೇಟ್ ಆದ ರಿಜಿಸ್ಟರ್ ನಂಬರ್ ಅನ್ನು ಚೆಕ್ ಮಾಡಿ ಖಚಿತಪಡಿಸಿಕೊಳ್ಳಬೇಕು. ಆನಂತರ ಜು.20ರಂದು ವೆಬ್​ಸೈಟ್​ ಮೂಲಕ ಫಲಿತಾಂಶ ಪಡೆಯಬಹುದು ಎಂದು ತಿಳಿಸಿದೆ.

ಇದನ್ನೂ ಓದಿ

SSLC Exam 2021; ಸುಗಮವಾಗಿ ಆರಂಭವಾದ ಎಸ್​ಎಸ್​ಎಲ್​ಸಿ ಪರೀಕ್ಷೆ, ಪರೀಕ್ಷಾ ಕೇಂದ್ರಗಳತ್ತ ಶಿಕ್ಷಣ ಸಚಿವರ ರೌಂಡ್ಸ್​

SSLC Exam 2021: ಈಗಲೂ ಹಾಲ್​ ಟಿಕೆಟ್ ಸಿಗದ ವಿದ್ಯಾರ್ಥಿಗಳಿದ್ದರೆ ಬಿಇಒಗಳನ್ನು ಸಂಪರ್ಕಿಸಿ: ಸಚಿವ ಸುರೇಶ್ ಕುಮಾರ್

(Suresh kumar says second puc results 2021 to be announced on july 20th evening 4 30 will be updated in website)

Published On - 10:48 am, Mon, 19 July 21

ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ