ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ; ಸಚಿವ ಸುರೇಶ್ ಕುಮಾರ್

ಸದ್ಯ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಾಠ ಕೇಳಲು ಮಕ್ಕಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಈ ಬಗ್ಗೆ ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ; ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
Follow us
TV9 Web
| Updated By: sandhya thejappa

Updated on: Jul 12, 2021 | 4:11 PM

ಬೆಂಗಳೂರು: ಕೊರೊನಾ ಸಂಕಷ್ಟ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ನೆಟ್ವರ್ಕ್ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು. ಈಗಾಗಲೇ ಡಾ.ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವರ ಗಮನಕ್ಕೆ ತಂದಿದ್ದಾರೆ.

ಸದ್ಯ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಾಠ ಕೇಳಲು ಮಕ್ಕಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಈ ಬಗ್ಗೆ ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಸದ್ಯ ಶಾಲೆ ತೆರೆಯಲು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ಮೊಬೈಲ್ ನೆಟ್ವರ್ಕ್​ನ ಬಲಪಡಿಸಬೇಕು. ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆಯುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಮುಖ್ಯ ಕಾರ್ಯದರ್ಶಿಯವರಿಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆ ಆನ್​ಲೈನ್​ನಂತಹ ಪರ್ಯಾಯ ವ್ಯವಸ್ಥೆಯ ಮೂಲಕ ಶಿಕ್ಷಣ ನೀಡಬೇಕಾಗಿದ್ದರಿಂದ ಗ್ರಾಮ ಪಂಚಾಯತಿಯ ಗ್ರಂಥಾಲಯಗಳಲ್ಲಿ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಶಾಂತ್ ಪ್ರಕಾಶ್ ಮತ್ತು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರರಾದ ಪ್ರೊ.ದೊರೆಸ್ವಾಮಿಯವರೊಂದಿಗೆ ಸಚಿವರು ಚರ್ಚಿಸಿದ್ದಾರೆ. ರಾಜ್ಯದಲ್ಲಿರುವ 5,766 ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ Karnataka Governmentಮೂಲಕ ದೂರದರ್ಶನ, ಮೊಬೈಲ್ ವಂಚಿತ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚಾ ಪ್ರಕ್ರಿಯೆಗಳು ಚಾಲನೆಯಲ್ಲಿವೆ ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿನ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಪರಿಣಾಮಕಾರಿ ಶಿಕ್ಷಣ ವ್ಯವಸ್ಥೆ ರೂಪಿಸುವ ಬಗ್ಗೆ ಎಸ್ಎಸ್ಎಲ್​ಸಿ ಪರೀಕ್ಷೆ ಮುಗಿದ ನಂತರ ಆರ್.ಡಿ.ಪಿ.ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಇದನ್ನೂ ಓದಿ

ತಮಿಳುನಾಡಿನ ಪಳನಿಯಲ್ಲಿ ಕೇರಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ‘ನಿರ್ಭಯಾ’ ಪ್ರಕರಣದಂತೆ ಪೈಶಾಚಿಕ ಕೃತ್ಯವೆಸಗಿದ ದುಷ್ಕರ್ಮಿಗಳು

ಶಾಲೆ ಆರಂಭಕ್ಕೆ ಶುರುವಾಯ್ತು ಕೌಂಟ್ ಡೌನ್

(Suresh Kumar says steps are being taken to solve the mobile network problem)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ