AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು

PSI Recruitment Scam: ಶೀಘ್ರವೇ ದಿವ್ಯಾ ಹಾಗರಗಿ ಅವರನ್ನು ಬಂಧಿಸಲಾಗುವುದು. ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವ್ರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದು ದಿವ್ಯಾ ಹಾಗರಗಿಗೆ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು
ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ದಿವ್ಯಾ ಹಾಗರಗಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ಮಿಶ್ರಿತ ಕಿವಿಮಾತು
TV9 Web
| Edited By: |

Updated on:Apr 28, 2022 | 1:20 PM

Share

ಬೆಂಗಳೂರು: ಕರ್ನಾಟಕ ಪೊಲೀಸ್​ ಸಬ್​ ಇನ್ಸ್ಪೆಕ್ಟರ್​ ನೇಮಕಾತಿ ಪ್ರಕ್ರಿಯೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅಷ್ಟೇ ಸಂಘಟಿತವಾಗಿ ಅಪರಾಧವೆಸಗಿರುವ ಪ್ರಮುಖ ಆರೋಪಿ ಎನ್ನಲಾದ ಕಲಬುರ್ಗಿಯ ದಿವ್ಯಾ ಹಾಗರಗಿ 3 ವಾರ ಆಯ್ತು ಪರಾರಿಯಾಗಿ. ಇನ್ನೂ ಅವರ ವೇರ್ ಎಬೌಟ್ಸ್​ ಬಗ್ಗೆ ರಾಜ್ಯ ಪೊಲೀಸರಿಗೆ ಕಿಂಚಿತ್ತೂ ಸುಳಿವು ದೊರೆತಿಲ್ಲ. ಈ ಮಧ್ಯೆ, ಖುದ್ದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೆ ಆರೋಪಿ ದಿವ್ಯಾ ಹಾಗರಗಿಗೆ (Divya Hagaragi) ಎಚ್ಚರಿಕೆ ಮಿಶ್ರಿತ ಕಿವಿಮಾತು ಹೇಳಿದ್ದಾರೆ. 545 ಪಿಎಸ್​ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಪ್ರತಿಕ್ರಿಯೆ ನೀಡಿದ್ದು ಶೀಘ್ರವೇ ದಿವ್ಯಾ ಹಾಗರಗಿ ಅವರನ್ನು ಬಂಧಿಸಲಾಗುವುದು. ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ. ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಕೊಟ್ಟಿದ್ದಾರೆ. ಶೀಘ್ರವೇ ಅವ್ರ ಆಸ್ತಿ ಮುಟ್ಟುಗೋಲು ಹಾಕಲಿದ್ದಾರೆ. ಗೌರವಯುತವಾಗಿ ಬಂದು ಶರಣಾಗಬೇಕು ಎಂದು ದಿವ್ಯಾ ಹಾಗರಗಿಗೆ ಆರಗ ಜ್ಞಾನೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ (PSI Recruitment Scam) .

ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಮುಖ್ಯಮಂತ್ರಿ ಗಮನಕ್ಕೆ ತಂದು ಮಾಡಿದ್ದೇನೆ. ಹಣಕ್ಕಾಗಿ ಸರ್ಕಾರಿ ಜಾಬ್ ಗಳನ್ನು ಮಾರಾಟ ಮಾಡುವ ಗ್ಯಾಂಗ್‌ ಅನ್ನು ಹೊರಗೆ ತರುತ್ತೇವೆ ಎಂದು ಸಚಿವ ಜ್ಞಾನೇಂದ್ರ ಇದೇ ಸಂದರ್ಭದಲ್ಲಿ ಹೇಳಿದರು.

ಶಾಸಕ ಪ್ರಿಯಾಂಕ್ ರನ್ನು ಪೊಲೀಸರು ಅರೆಸ್ಟ್ ಮಾಡ್ತಾರಾ? ವಿಚಾರಣೆ ತಾನೇ ಮಾಡೋದು.. ವಿಚಾರಣೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಾಜರಾಗದ ವಿಚಾರ ಪ್ರಸ್ತಾಪಿಸಿದಾಗ ಪ್ರಿಯಾಂಕ್ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅವ್ರು ತನಿಖೆಗೆ ಸಹಕಾರ ಕೊಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ನನ್ನ ಬಳಿ ದಾಖಲೆ ಇದೆ ಅನ್ನುತ್ತಾರೆ! ಅವ್ರು ದಾಖಲೆ ಕೊಡಬಹುದು ಅಲ್ವಾ!? ಅವ್ರ ತಂದೆ ಎಷ್ಟು ದೊಡ್ಡವರು. ಅವರಿಗೆ ತನಿಖೆ ಬಗ್ಗೆ ಗೊತ್ತಿಲ್ವಾ? ಅವರನ್ನು ಏನು ಅರೆಸ್ಟ್ ಮಾಡ್ತಾರಾ? ವಿಚಾರಣೆ ತಾನೇ ಮಾಡೋದು. ಅವರ ಬಳಿ ಇರೋ ದಾಖಲೆ ಕೊಡಲಿ. ಬುಟ್ಟಿಯಲ್ಲಿ ಹಾವು ಇಟ್ಟುಕೊಂಡು ಬಿಡ್ತೀನಿ ಅನ್ನೋದು ಎಷ್ಟು ಸರಿ? ಎಂದು ಸಚಿವ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಐಪಿ ಎಸ್​ ಅಧಿಕಾರಿ ಅಮೃತ್ ಪಾಲ್ ವರ್ಗಾವಣೆ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವರು ವರ್ಗಾವಣೆ ಸಹಜ ಪ್ರಕ್ರಿಯೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ಅವರ ಹೆಸರು ತನಿಖೆಯಲ್ಲಿ ಬಂದಿಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತೋ ಅವರೇ ಮುಂದೆ ತಪ್ಪಿತಸ್ಥರು ಆಗ್ತಾರೆ ಎಂದು ಸಚಿವ ಆರಗ ಹೇಳಿದರು.

Also Read: ಮತ್ತೊಂದು ದಿವ್ಯ ಕೊಡುಗೆ! ’6 ವರ್ಷ ಹಿಂದೆಯೇ ದಿವ್ಯಾ ಹಾಗರಗಿ ಮೂಲಕ 16 ಪಿಎಸ್​ಐಗಳು ಆಯ್ಕೆಯಾಗಿದ್ದಾರೆ ಮಹಾಸ್ವಾಮಿ!’

Also Read: PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

Published On - 1:11 pm, Thu, 28 April 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!