ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌
Follow us
|

Updated on: Sep 15, 2024 | 10:47 PM

ಬೆಂಗಳೂರು, ಸೆಪ್ಟೆಂಬರ್​ 15: ಮಂಡ್ಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ (Mandya Violence) ಘಟನೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ನಾಗಮಂಗಲ ಗಲಾಟೆ‌ ಹಿಂದೆ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತ ಬೆನ್ನಲ್ಲೇ ಪ್ರಕರಣವನ್ನ ಎನ್​​ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಆರ್‌. ಅಶೋಕ್‌, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್​​ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.

ಆರ್‌. ಅಶೋಕ್‌ ಟ್ವೀಟ್​

ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್​ಐಆರ್​ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.