ಬೆಂಗಳೂರು, ಸೆಪ್ಟೆಂಬರ್ 15: ಮಂಡ್ಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ (Mandya Violence) ಘಟನೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ನಾಗಮಂಗಲ ಗಲಾಟೆ ಹಿಂದೆ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂಬ ಶಂಕೆ ವ್ಯಕ್ತ ಬೆನ್ನಲ್ಲೇ ಪ್ರಕರಣವನ್ನ ಎನ್ಐಎಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರ್. ಅಶೋಕ್, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಪಿಎಫ್ಐ, ಕೆಇಡಿ ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ ಮತ್ತು ಪೂರ್ವನಿಯೋಜಿವಾಗಿದೆ ಎಂಬುದು ಸ್ಥಳೀಯರ ಅನುಮಾನವಾಗಿದೆ ಎಂದಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ PFI, KFD ಅಂತಹ ನಿಷೇಧಿತ ಸಂಘಟನೆಗಳ ನಂಟು ಹೊಂದಿರುವ ಕೇರಳ ಮೂಲದ ವ್ಯಕ್ತಿಗಳ ಕೈವಾಡವಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಈ ದುರುಳರು ಗಲಭೆಗೊ ಮುನ್ನ 150 ಮಾಸ್ಕ ಖರೀದಿಸಿದ್ದಾರೆ, ಸಿಸಿಟಿವಿಗಳನ್ನ ನಾಶ ಮಾಡಿದ್ದಾರೆ, ಮತ್ತು ಈ ದುಷ್ಕೃತ್ಯ ಸಂಪೂರ್ಣ ಪ್ರಾಯೋಜಿತ… pic.twitter.com/Kf0g7BBarf
— R. Ashoka (@RAshokaBJP) September 15, 2024
ಅಷ್ಟೇ ಅಲ್ಲದೆ ಸರ್ಕಾರ ದಾಖಲಿಸಿರುವ ಎಫ್ಐಆರ್ನಲ್ಲಿ ಮೊದಲ 23 ಆರೋಪಿಗಳು ಹಿಂದೂಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ
ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.