AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಸ್ವಾಮೀಜಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ. ಭಕ್ತರಲ್ಲಿ ಆತಂಕ ಮನೆಮಾಡಿದ್ದು, ಸ್ವಾಮೀಜಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ.

ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ
ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ
ಭೀಮೇಶ್​​ ಪೂಜಾರ್
| Edited By: |

Updated on: Feb 19, 2026 | 9:18 AM

Share

ರಾಯಚೂರು, ಫೆ.19: ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಸದ್ಯ ಸ್ವಾಮೀಜಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.

ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ ಶ್ರೀಗಳು, ನಿನ್ನೆ ರಾತ್ರಿ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಅವರಿಗೆ ಏಕಾಏಕಿ ಎದೆನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದೆ.ಅಸ್ವಸ್ಥಗೊಂಡ ಶ್ರೀಗಳನ್ನು ಕೂಡಲೇ ರಾಯಚೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು.

ವೈದ್ಯರ ಸಲಹೆಯಂತೆ, ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ರಾಯಚೂರಿನಿಂದ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಶ್ರೀಗಳು ಹೈದರಾಬಾದ್‌ನಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮಠದ ಮೂಲಗಳು ಮತ್ತು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!

ಶ್ರೀಗಳ ಆರೋಗ್ಯ ಹದಗೆಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ರಾಜ್ಯಾದ್ಯಂತ ವಾಲ್ಮೀಕಿ ಸಮುದಾಯದ ಭಕ್ತರು ಮತ್ತು ಅನುಯಾಯಿಗಳಲ್ಲಿ ಆತಂಕ ಮೂಡಿದೆ. ಶ್ರೀಗಳು ಶೀಘ್ರವಾಗಿ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ರಣಬಿಸಿಲಿನಿಂದ ರಕ್ಷಣೆಗೆ ಶ್ವಾನದಳಕ್ಕೆ ವಿಶೇಷ 'ಕೂಲ್' ಟ್ರೀಟ್ಮೆಂಟ್!
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!
ಮೊದಲ ಹೆಜ್ಜೆಯನ್ನಿಟ್ಟ ಮಗಳನ್ನು ಕಂಡು ಭಾವುಕಳಾದ ತಾಯಿ!